ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್ ಅಶೋಕ್ ಮುಕ್ತ- ಸಿಎಂ ಬಸವರಾಜ ಬೊಮ್ಮಾಯಿ; ಗೋ ಬ್ಯಾಕ್ ಅಭಿಯಾನಕ್ಕೆ ಬೆಚ್ಚಿದ್ರಾ ಸಾಮ್ರಾಟ್!
ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು ಎಂದು ಬೊಮ್ಮಾಯಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಬದಲಾಯಿಸಲಾಗಿದ್ದು, ಇನ್ನು ಯಾರನ್ನೂ ನೇಮಕ ಮಾಡಿಲ್ಲ ಎಂದು ಹೇಳಿದ್ದಾರೆ.
ಅಶೋಕ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ ಮೇಲೆ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆದಿತ್ತು. ಜಿಲ್ಲೆಯಲ್ಲಿ ಹೊತ್ತಿಕೊಂಡಿರುವ ಅಸಮಾಧಾನ ಹೊಗೆ ಹೊತ್ತಿಕೊಂಡ ಹಿನ್ನೆಲೆಯಲ್ಲಿ. ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಮುನ್ನೆಚ್ಚರಿಕೆಯಿಂದ ಅಶೋಕ್ ಅವರನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ.
ಸಚಿವ ಆರ್ ಅಶೋಕ್ ಅವರು ಮೂಲತಃ ಬೆಂಗಳೂರು ನಗರದವರಾಗಿದ್ದು, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಅವರಿಗೆ ಮಂಡ್ಯ ಜಿಲ್ಲೆಯ ಉಸ್ತುವಾರಿ ನೀಡಿರುವುದರಿಂದ ಅತ್ತ ಮಂಡ್ಯಕ್ಕೂ ಹೋಗದೆ, ಇತ್ತ ಪದ್ಮನಾಭ ನಗರ ಕ್ಷೇತ್ರಕ್ಕೂ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಚಿವ ಆರ್ ಅಶೋಕ್ ಅವರಿಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


