ರಾಜಕೀಯ

ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ?: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ವ್ಯಂಗ್ಯವಾಡಿದ್ದಾರೆ.

ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ?: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ಹೆಚ್.ಡಿ.ಕುಮಾರಸ್ವಾಮಿ
Published On :

ಹುಬ್ಬಳ್ಳಿ: ಏರೋ ಶೋ ಬಡತನ ನಿವಾರಿಸುವ ಕಾರ್ಯಕ್ರಮವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸೋಮವಾರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರೋಶೋ ಬಡತನ ನಿವಾರಿಸುವ ಕಾರ್ಯಕ್ರಮವೇ. ಏರೋ ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ,

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಅಲ್ಲ ಸುಳ್ಳಿನ ರಾಮಯ್ಯ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಮೈತ್ರಿ ಸರ್ಕಾರ ಬಂದ 2 ತಿಂಗಳಲ್ಲೇ ಸರ್ಕಾರ ಪತನ ಬಗ್ಗೆ ಹೇಳಿದ್ದರು. ಬಿಜೆಪಿಯ ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲೇ ಮಾತನಾಡಿ. ಸಿದ್ದರಾಮಯ್ಯ ಕುರ್ಚಿಗಾಗಿ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡುವುದಕ್ಕೆ ಸಿದ್ಧರಿದ್ದರು. ಇನ್ನೂ 10 ವರ್ಷವಾದರೂ ಇವರಿಗೆ ಬಿಜೆಪಿ ತೆಗೆಯಲು ಆಗಲ್ಲ. ಜೆಡಿಎಸ್​ನಿಂದ ಮಾತ್ರ ಬಿಜೆಪಿ ತೆಗೆಯೋಕೆ ಸಾಧ್ಯ ಎಂದು ಹೇಳಿದರು.

ಬ್ರಾಹ್ಮಣ ಸಮಾಜದ ಬಗ್ಗೆ ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ಇಡೀ ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಡುತ್ತಿಲ್ಲ. ಪೇಶ್ವೆ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದು, ಅದಕ್ಕೆ ಉತ್ತರ ಕೊಡಲಿ ಎಂದು ತಿಳಿಸಿದರು.

ಬ್ರಾಹ್ಮಣರು ಸಿಎಂ ಆಗಬಾರದೆಂದು ನಾನು ಹೇಳಿಲ್ಲ. ಪೇಶ್ವೆ ಡಿಎನ್​ಎ ಸಿಎಂ ಆಗಬಾರದು ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣರ ಕುರಿತ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಆದರೆ, ಪೇಶ್ವೆ ಡಿಎನ್​ಎ ಇರೋರು ಮುಖ್ಯಮಂತ್ರಿ ಆಗಬಾರದು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.