ರಾಜಕೀಯ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ: ಇಂದು ಶಾಸಕಾಂಗ ಪಕ್ಷ ಸಭೆ ಕರೆದ ಬಿಜೆಪಿ

ನಾಡಿದ್ದು, ಇದೇ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ.

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ: ಇಂದು ಶಾಸಕಾಂಗ ಪಕ್ಷ ಸಭೆ ಕರೆದ ಬಿಜೆಪಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಾಡಿದ್ದು, ಇದೇ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ. 

ಬಜೆಟ್ ಮಂಡನೆಗೆ ಮುನ್ನ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವ ಬಿಜೆಪಿ, ಬಜೆಟ್ ಗೆ ಯಾವುದೇ ತೊಂದರೆಯಿಲ್ಲದೆ ಅಂಗೀಕಾರ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಯತಂತ್ರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. 

ಇದು ಚುನಾವಣೆ ವರ್ಷವಾಗಿರುವುದರಿಂದ ಬಜೆಟ್‌ಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ತೀವ್ರ ವಿರೋಧ ವ್ಯಕ್ತವಾಗಲಿದ್ದು, ಶಾಸಕರು ಪೂರ್ಣ ಪ್ರಮಾಣದಲ್ಲಿ ಹಾಜರಿರಲು ಸೂಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಕೊನೆಯ ಶಾಸಕಾಂಗ ಪಕ್ಷದ ಸಭೆಯಾಗುವ ಸಾಧ್ಯತೆ ಇದ್ದು, ಮಾರ್ಚ್‌ನಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. 

ಫೆಬ್ರವರಿ 23 ರಂದು ಅಧಿವೇಶನ ಮುಕ್ತಾಯಗೊಳ್ಳಬಹುದು, ಹೀಗಾಗಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಮರಳಬಹುದು ಎಂಬ ಚರ್ಚೆ ಇದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರು ತಮ್ಮ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ ಬಜೆಟ್ ಅಧಿವೇಶನದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವುದು ಅನುಮಾನವಾಗಿದೆ. ಅನೇಕರು ಇಡೀ ಅಧಿವೇಶನದಲ್ಲಿ ಭಾಗವಹಿಸಲು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದು, ತಂತಮ್ಮ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ಬಿಜೆಪಿಯು ಬಜೆಟ್ ಅಧಿವೇಶನದಲ್ಲಿ ಅನೇಕ ಮಸೂದೆಗಳಿಗೆ ಅಂಗೀಕಾರವನ್ನು ಬಯಸುತ್ತದೆ. ಕಲಾಪವನ್ನು ಬೇಗ ಮುಗಿಸುವಂತೆ ಹಲವು ಶಾಸಕರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಸದನದ ಕಲಾಪವನ್ನು ಎಲ್ಲರೂ ಅರ್ಥಮಾಡಿಕೊಂಡಿದ್ದು ಪವಿತ್ರವಾಗಿದ್ದು, ಶಾಸಕಾಂಗ ಪಕ್ಷ ಸಭೆಯಲ್ಲಿ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.