ಸಾವಿನ ಭಯ ನನಗಿಲ್ಲ; ಕೊಲೆಗಡುಕ ಮನಸ್ಥಿತಿಯ ಬಿಜೆಪಿ ಬಗ್ಗೆ ಜನ ಎಚ್ಚರಗೊಳ್ಳಬೇಕು: ಸಿದ್ದರಾಮಯ್ಯ
ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವಿನ ಭಯ ನನಗಿಲ್ಲ, ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು ಎಂದಿದ್ದಾರೆ.
ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು, ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿ ಅವರ ಬೌದ್ಧಿಕ ದಿವಾಳಿತನದ ಪ್ರತೀಕ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ. ಅವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತ ಎಂದು ಅವರು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


