ರಾಜಕೀಯ

ಟಿಪ್ಪು ಸುಲ್ತಾನ್ ರೀತಿ ನನ್ನನ್ನು ಮುಗಿಸಿ ಅಂದರೆ ಇದರರ್ಥ ಏನು, ಜನರಿಗೆ ಪ್ರಚೋದನೆ ನೀಡಿದಂತೆ ಅಲ್ಲವೇ: ಸಿದ್ದರಾಮಯ್ಯ

ಹೊಡಿ ಬಡಿ ಎಂಬುದು ಬಿಜೆಪಿಯವರ ಸಂಸ್ಕೃತಿ. ಸಿದ್ದರಾಮಯ್ಯರನ್ನು ಮುಗಿಸಿ ಅಂದರೇ ಏನು ಅರ್ಥ ಇದು. ಟಿಪ್ಪು ಸುಲ್ತಾನ್ ರೀತಿ ನನ್ನನ್ನು ಮುಗಿಸಿ ಅಂದರೆ ಇದರರ್ಥ ಏನು ಎಂದು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡುವಾಗ ಸಿದ್ದರಾಮಯ್ಯ ಕೇಳಿದ್ದಾರೆ.

ಟಿಪ್ಪು ಸುಲ್ತಾನ್ ರೀತಿ ನನ್ನನ್ನು ಮುಗಿಸಿ ಅಂದರೆ ಇದರರ್ಥ ಏನು, ಜನರಿಗೆ ಪ್ರಚೋದನೆ ನೀಡಿದಂತೆ ಅಲ್ಲವೇ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕೋಣ’ ಎಂದರೆ ಆ ಮಾತಿನ ಅರ್ಥವೇನು ಹೇಳಿ, ಸಿದ್ದರಾಮಯ್ಯನನ್ನು ಕೊಂದುಬಿಡಿ ಎಂದು ಸಾರ್ವಜನಿಕರಿಗೆ ಪ್ರಚೋದನೆ ನೀಡಿದಂತಲ್ಲವೇ, ಹೊಡಿ ಬಡಿ ಎಂಬುದು ಬಿಜೆಪಿಯವರ ಸಂಸ್ಕೃತಿ. ಸಿದ್ದರಾಮಯ್ಯರನ್ನು ಮುಗಿಸಿ ಅಂದರೇ ಏನು ಅರ್ಥ ಇದು. ಟಿಪ್ಪು ಸುಲ್ತಾನ್ ರೀತಿ ನನ್ನನ್ನು ಮುಗಿಸಿ ಅಂದರೆ ಇದರರ್ಥ ಏನು ಎಂದು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡುವಾಗ ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಧಾನಮಂತ್ರಿ ಮೋದಿ, ಅಮಿತ್ ಶಾ ಈ ಬಗ್ಗೆ ಪ್ರತಿಕ್ರಿಯೆ ನೀಡಲಿ. ಇದು ಸರೀನಾ, ತಪ್ಪು ಅಂತಾ ಪ್ರಧಾನಿ ಮೋದಿ, ಅಮಿತ್ ಶಾ ಹೇಳಲಿ. ಕೂಡಲೇ ಸಚಿವ ಡಾ.ಅಶ್ವತ್ಥ್​ ನಾರಾಯಣ ವಜಾಗೊಳಿಸಬೇಕು ಎಂದು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಆತ ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ. ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದವರನ್ನು ಬೆಂಬಲಿಸುವ ಪಕ್ಷದ ಅಶ್ವತ್ಥ್ ನಾರಾಯಣ ಅವರಿಂದ ಇಂಥ ಹೇಳಿಕೆ ಮೂಡಿಬಂದಿರುವುದರಿಂದ ಅಚ್ಚರಿಯಿಲ್ಲ. ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ಸಚಿವರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅವರ ಸರ್ಕಾರ ನಿದ್ದೆ ಮಾಡುತ್ತಿದೆ. ಅಶ್ವತ್ಥ್ ನಾರಾಯಣ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ಏಕವಚನದಲ್ಲಿ ನಿನ್ನೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.