ರಾಜಕೀಯ

ಭ್ರಷ್ಟಾಚಾರ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಆ ಪಕ್ಷಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ

ಪ್ರತಿಪಕ್ಷ ಮಾಡುತ್ತಿರುವ ಭ್ರಷ್ಟಾಚಾರದ ಆರೋಪದ ಕುರಿತು ಸರ್ಕಾರವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕಾಂಗ್ರೆಸ್ ವಿರುದ್ಧ ಸೋಮವಾರ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಆ ಪಕ್ಷಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Published On :

ಬೆಂಗಳೂರು: ಪ್ರತಿಪಕ್ಷ ಮಾಡುತ್ತಿರುವ ಭ್ರಷ್ಟಾಚಾರದ ಆರೋಪದ ಕುರಿತು ಸರ್ಕಾರವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕಾಂಗ್ರೆಸ್ ವಿರುದ್ಧ ಸೋಮವಾರ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಸೋಮವಾರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಕಾಂಗ್ರೆಸ್ ವಿರುದ್ಧ ಗುಡುಗಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮೂರು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಇವೆಲ್ಲವೂ ಕರ್ನಾಟಕವನ್ನು ಅತ್ಯಂತ ಭ್ರಷ್ಟ ರಾಜ್ಯ ಎಂದು ಪರಿಗಣಿಸಿದೆ. ಟೆಂಡರ್‌ಶ್ಯೂರ್ ಸೇರಿದಂತೆ ಹಲವು ಕಾಮಗಾರಿಗಳಿಗೆ ಶೇ.53ಕ್ಕಿಂತ ಹೆಚ್ಚು ಕೋಟ್ ಮಾಡಿದ ಬಿಡ್‌ದಾರರಿಗೆ ಗುತ್ತಿಗೆ ನೀಡಲಾಗಿದೆ. ಹಲವು ರಸ್ತೆ ಕಾಮಗಾರಿ ಗುತ್ತಿಗೆಗಳನ್ನು ಶೇ.47 ಕೋಟ್ ಮಾಡಿದ ಬಿಡ್‌ದಾರರಿಗೆ ನೀಡಲಾಗಿದೆ. ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಾಗಿದೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 59 ಭ್ರಷ್ಟಾಚಾರದ ಆರೋಪಗಳನ್ನು ಭ್ರಷ್ಟಾಚಾರ ನಿಗ್ರಹ ದಳದ ಮುಂದೆ ಸಲ್ಲಿಸಲಾಗಿತ್ತು. ಆರೋಪಗಳ ತನಿಖೆ ಮಾಡುವ ಬದಲು ಲೋಕಾಯುಕ್ತವನ್ನು ಶಕ್ತಿಹೀನಗೊಳಿಸಿದರು. ಎಲ್ಲ 59 ಪ್ರಕರಣಗಳನ್ನು ಬಿ ರಿಪೋರ್ಟ್ ನೀಡಿ ಅಥವಾ ವಿಚಾರಣೆ ಆರಂಭಿಸದೆ ದುರ್ಬಲಗೊಳಿಸಲಾಗಿದೆ. ಈ ಎಲ್ಲಾ ದೂರುಗಳನ್ನು ಲೋಕಾಯುಕ್ತಕ್ಕೆ ಮರು ತನಿಖೆ ಮಾಡಲಿದೆ. ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸುತ್ತಿದೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರರನ್ನ ರಕ್ಷಣೆ ಮಾಡುತ್ತಿದ್ದರು. ಇದೀಗ ಅವರ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

"ಕಾಂಗ್ರೆಸ್ ಸದಸ್ಯರು ಮತ್ತು ಸಿವಿಲ್ ಕಾಂಟ್ರಾಕ್ಟ್ ಅಸೋಸಿಯೇಷನ್ ​​ನಮ್ಮ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪಗಳನ್ನು ಮಾಡಿದರು. ಈ ವೇಳೆ ನಾನು ಲೋಕಾಯುಕ್ತ ಅಥವಾ ನ್ಯಾಯಾಲಯಕ್ಕೆ ಪುರಾವೆಗಳನ್ನು ಒದಗಿಸುವಂತೆ ಕೇಳಿದೆ, ಆದರೆ ಅವರು ಸಾಕ್ಷ್ಯಾಧಾರಗಳನ್ನು ಒದಗಿಸಲಿಲ್ಲ.

"ಕಳೆದ ಐದು ವರ್ಷಗಳಲ್ಲಿ, ಬಿಜೆಪಿ ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿದೆ, 2019 ರಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ಭಾರಿ ಪ್ರವಾಹಗಳು ಉಂಟಾಗಿದ್ದವು. ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದ ಸಂದರ್ಭದಲ್ಲೇ ಕೋವಿಡ್ ಪರಿಸ್ಥಿತಿಯನ್ನೂ ಎದುರಿಸಬೇಕಾಯಿತು. ಈ ಎಲ್ಲ ಸವಾಲುಗಳ ನಡುವೆಯೂ ಉತ್ಕೃಷ್ಟತೆ ಸಾಧಿಸುವಲ್ಲಿ ಯಶಸ್ವಿಯಾದೆವು. ಅದಕ್ಕಾಗಿಯೇ ಹೆಚ್ಚುವರಿ ಬಜೆಟ್‌ ಮಂಡನೆ ಮಾಡಲಾಗಿದೆ. ಹಲವು ಸವಾಲುಗಳು ಎದುರಾಗಿದ್ದ ಹಿನ್ನೆಲೆಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ 173 ಆಶ್ವಾಸನೆಗಳಲ್ಲಿ ಕೇವಲ 67 ಆಶ್ವಾಸನೆಗಳನ್ನು ಮಾತ್ರ ಪೂರೈಸಲಾಗಿತ್ತು. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಯಾವುದೇ ಭಾಗ್ಯಗಳನ್ನು ನೀಡಲಿಲ್ಲ, ಕೇವಲ ದೂರಭಾಗ್ಯ (ದುಃಖ) ಕರುಣುಸಿದರು ಎಂದು ತಿರುಗೇಟು ನೀಡಿದರು.

"ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆಗಳು ಅತಿ ಹೆಚ್ಚಾಗಿತ್ತು. ಅದಕ್ಕೆ ಪರಿಹಾರವಾಗಿ ರೈತರ ಮೇಲೆ ಗುಂಡು ಹಾರಿಸಲಾಯಿತು. ಈಗ ಇದೇ ನಾಯಕರು ನಮಗೆ ಉಪದೇಶಿಸುತ್ತಿದ್ದಾರೆ. ರೈತ ಪರ ನಿಲುವುಗಳನ್ನು ತೆಗೆದುಕೊಳ್ಳುತ್ತಾರೆಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.