ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಧರ್ಮೇಂದ್ರ ಪ್ರಧಾನ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Published On :

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.  

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದು, ರಾಜ್ಯದ ಜನರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇದ್ದಾರೆ. ಮೋದಿ ಅವರ ಉತ್ತಮ ಆಡಳಿತ, ಹಾಗೂ ಬಿಎಸ್ ಯಡಿಯೂರಪ್ಪ , ಸಿಎಂ ಬಸವರಾಜ ಬೊಮ್ಮಾಯಿ ಮಾಡಿರುವ ಜನಪರ ಕಾರ್ಯಗಳಿಂದಾಗಿ ಪಕ್ಷ ಬಹುಮತ ಪಡೆಯಲಿದೆ ಎಂಬ ವಿಶ್ವಾಸವಿದೆ ಎಂದರು. 

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಬೆಂಗಳೂರಿಗೆ ಆಗಮಿಸಿದ್ದು, ಚುನಾವಣೆಗೆ ಸಿದ್ಧತೆ ಕುರಿತು ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಗುರುವಾರ ಸಂಜೆ ಪ್ರಧಾನ್ ಅವರು ಮಾಜಿ ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಸಿದರು.

ರಾಜ್ಯದ ಉಸ್ತುವಾರಿ  ಅರುಣ್ ಸಿಂಗ್ ಅವರಿಗೆ ಸಹಾಯ ಮಾಡಲು ಅವರು ರಾಜ್ಯದಲ್ಲಿರುವುದಾಗಿ ಪ್ರಧಾನ್ ಹೇಳಿದರು. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಆಗಾಗ್ಗೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಮತ್ತು ಜನರ ಆಶೀರ್ವಾದ ಪಡೆಯಲು ಮೋದಿ ಕೂಡ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.