ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಮಗನಾಗಲಿ ಸ್ಪರ್ಧಿಸುವುದಿಲ್ಲ: ವೀರಪ್ಪ ಮೊಯ್ಲಿ
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದರು.

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಕಾರ್ಕಳ ಕ್ಷೇತ್ರದಲ್ಲಿ ಒಳ್ಳೆಯ ಕಾರ್ಯಕರ್ತರಿಗೆ ಪಕ್ಷ ಟಿಕೆಟ್ ನೀಡಲಿದೆ. ಈ ಚುನಾವಣೆಯಲ್ಲಿ ಹರ್ಷ ಮೊಯಿಲಿ ಕಾರ್ಕಳದಲ್ಲಿ ಮಾತ್ರವಲ್ಲ, ಬೇರೆ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದರು.
ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಏನು ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದೇನೆ. ಕೆಲವೊಂದು ವಿಚಾರದಲ್ಲಿ ಎಚ್ಚರವಹಿಸಿದ್ದೇ ಆದರೆ, ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಿ ದಂತೆ ರಾಜ್ಯದಲ್ಲೂ ಗೆಲುವು ಸಾಧಿಸಬಹುದು. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶವನ್ನು ಗಲಭೆಯ ಕೂಪಕ್ಕೆ ತಳ್ಳಲು ಎನ್‌ಡಿಎ ಪ್ರಯತ್ನಿಸುತ್ತಿದೆ. ಜನರ ಮನಸುಗಳನ್ನು ಗೊಂದಲಗೊಳಿಸಿ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಪ್ರಯತ್ನ ಮಾಡುತ್ತಿದೆ. ಹಾಗಾಗಿಯೇ ದೇಶದಲ್ಲಿ ಕೊಲೆ, ಮತೀಯ ಗಲಭೆಗಳು ಹೆಚ್ಚುತ್ತಿವೆ. ಅವರ ಪ್ರಚೋದನೆಗೆ ನಮ್ಮ ನಾಯಕರು ಪ್ರತಿಕ್ರಿಯಿಸಬಾರದು. ರಾಷ್ಟ್ರೀಯ ಸಂವಾದದಿಂದ ವಿಚಲಿತ ಆಗದಂತೆ ಎಚ್ಚರವಹಿಸಬೇಕು ಎಂದರು.
ಕಾಂಗ್ರೆಸ್‌ಗೆ ರಾಷ್ಟ್ರೀಯ ಹಿತ ಚಿಂತನೆ ಮುಖ್ಯ. ನಾವು ಜಾತಿ, ಮತ ಹಾಗೂ ಪ್ರಾದೇಶಿಕತೆಯನ್ನು ಆಧರಿಸಿ ಆಲೋಚಿ ಸಲು ಬರುವುದಿಲ್ಲ. ಜನರ ಆಲೋಚನೆ ಗಳನ್ನೂ ಸರಿಯಾದ ದಿಕ್ಕಿನಲ್ಲಿ ಕೊಂಡೊ ಯ್ಯುವ ಮೂಲಕ ಸಾಮಾಜಿಕ ಸುಸ್ಥಿರತೆ ಕಾಪಾಡುವ ಹೊಣೆ ನಮ್ಮ ಮೇಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


