ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ
‘ಸ್ಯಾಂಟ್ರೋ ರವಿ'ಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಅವರ ಪುತ್ರ ಭರತ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬೆಂಗಳೂರು: ‘ಸ್ಯಾಂಟ್ರೋ ರವಿ'ಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಅವರ ಪುತ್ರ ಭರತ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಸಿಎಂ ಮನೆಗೆ ಹಲವರು ಭೇಟಿ ನೀಡುತ್ತಿರುತ್ತಾರೆ. ಇಲ್ಲಿಗೆ ಬರುವವರು ಸಿಎಂ ಹಾಗೂ ಕುಟುಂಬದವರ ಜೊತೆ ಫೋಟೋ ತೆಗೆಸಿಕೊಂಡು ಹೋಗುವುದು ಸಾಮಾನ್ಯ. ‘ಸ್ಯಾಂಟ್ರೋ ರವಿ'' ಫೋಟೋ ತೆಗೆದಿರಬಹುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಥವಾ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ. ಇವೆಲ್ಲವೂ ವಿರೋಧ ಪಕ್ಷಗಳ ಕಾರ್ಖಾನೆಗಳಲ್ಲಿ ತಯಾರಾದ ಸುಳ್ಳು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ರಾಜ್ಯ ಘಟಕವು ಹೇಳಿಕೆ ನೀಡಿದ್ದು, “ಸಚಿವ ಎಸ್‌ಟಿ ಸೋಮಶೇಖರ್ ಅವರು ರವಿಯನ್ನು ತಿಳಿದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ, ಆದರೆ ಈಗ ವಾಸ್ತವ ಹೊರಬಂದಿದೆ ಮತ್ತು ರವಿ ಯಾರೆಂದು ನನಗೆ ತಿಳಿದಿಲ್ಲ, ಆದರೆ ಈಗ ಏನು ವಿವರಣೆ ನೀಡುತ್ತೀರಿ, ಇನ್ನಾದರೂ ಸತ್ಯ ಹೊರಬರುತ್ತದೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು, ಸಿಎಂ ಬೊಮ್ಮಾಯಿಯನ್ನು ತಿವಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


