ರಾಜಕೀಯ

'ಸಿದ್ದು ನಿಜ ಕನಸುಗಳು': ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ನಿಂದ ತಡೆ

'ಸಿದ್ದು ನಿಜ ಕನಸುಗಳು" ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. "ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

'ಸಿದ್ದು ನಿಜ ಕನಸುಗಳು': ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ನಿಂದ ತಡೆ
ಸಿದ್ದು ನಿಜ ಕನಸುಗಳು ಪುಸ್ತಕ
Published On :

ಬೆಂಗಳೂರು: 'ಸಿದ್ದು ನಿಜ ಕನಸುಗಳು" ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್  ಮಧ್ಯಂತರ ತಡೆ ನೀಡಿದೆ. "ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು.  ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಸಂಬಂಧ ಡಾ. ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನಗರದ 60ನೇ ಸಿಸಿಹೆಚ್ ನ್ಯಾಯಾಲಯ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಪ್ರತಿವಾದಿಗಳಾಗಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದೆ. 

ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅರ್ಜಿದಾರರ ಪರ ವಾದ ಮಂಡಿಸಿದರು. ಇದಕ್ಕೂ ಮುನ್ನ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆ ಹತ್ತಿರವಿರುವಂತೆಯೇ ಬಿಜೆಪಿ ಇಂತಹ ಕುತಂತ್ರ ಮಾಡಲು ಮುಂದಾಗಿದೆ. ನಾನು ಹಿಂದೂ ಆದರೆ ಹಿಂದೂತ್ವ ವಿರೋಧಿ. ಪುಸ್ತಕದ ಮೂಲಕ ತಮ್ಮ ತೇಜೋವಧೆಗೆ ಮುಂದಾಗಿರುವುದಾಗಿ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.