ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ- ಯಡಿಯೂರಪ್ಪ
ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ: ರಾಜಕೀಯವಾಗಿ ಕುಮಾರಸ್ವಾಮಿ ಹತಾಶ ಸ್ಥಿತಿ ತಲುಪಿದ್ದಾರೆ: ಸ್ಯಾಂಟ್ರೊ ರವಿ ವಿಚಾರಕ್ಕೆ ಹೆಚ್ ಡಿಕೆ- ಆರಗ ಜ್ಞಾನೇಂದ್ರ ಜಟಾಪಟಿ
ನಗರದಲ್ಲಿಂದು ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠ ಕಲಿಸುತ್ತೇವೆ ಎಂದರು. ಸಂಪುಟ ವಿಸ್ತರಣೆಗೆ ಕೇಂದ್ರದ ನಾಯಕರ ಸೂಚನೆ ಎದುರು ನೋಡುತ್ತಿದ್ದೇವೆ, ಭರ್ತಿ ಮಾಡುವ ಸ್ಥಾನಗಳ ಬಗ್ಗೆಯೂ ತಿಳಿದಿಲ್ಲ. ಕೆಎಸ್ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ ಕುರಿತು ಮಾತನಾಡಿದ ಅವರು, ಮೀಸಲಾತಿ ಬಗ್ಗೆ ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


