ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ದಳಪತಿ 'ಕೈ' ಗಾಹುತಿ!
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮರ್ಥ ಎದುರಾಳಿ ಎಂದೇ ಪರಿಗಣಿತವಾಗಿದ್ದ ಜೆಡಿಎಸ್‌ನ ಡಿ ಎಂ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವೈ.ಎಸ್.ವಿ ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಜೆಡಿಎಸ್‌ನ ಮತ್ತೊಂದು ಪ್ರಮುಖ ವಿಕೆಟ್ ಪತನವಾಗಿದೆ. ರಾಮನಗರ ಜಿಲ್ಲೆಯ ಜೆಡಿಎಸ್‌ನ ಪ್ರಭಾವಿ ನಾಯಕ, 2008ರಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದಾರೆ.
2008ರ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಅವರೆದುರು ಜೆಡಿಎಸ್ ಅಭ್ಯರ್ಥಿಯಾಗಿದ್ದ ವಿಶ್ವನಾಥ್, ಕೇವಲ ಎಂಟು ಸಾವಿರ ಮತಗಳ ಅಂತರದಿಂದ ಪರಾಜಯಗೊಂಡಿದ್ದರು. ಅತಿ ಕಡಿಮೆ ಮತಗಳ ಅಂತರದಲ್ಲಿ ಸೋಲನ್ನಪ್ಪಿದ ಕಾರಣ ಹಾಗೂ ವಿಶ್ವನಾಥ್ ಅವರ ಪರವಿದ್ದ ಜನರ ಒಲವಿನ ಹಿನ್ನೆಲೆ ಪರಿಗಣಿಸಿ ಮುಂದಿನ ಚುನಾವಣೆಗಳಲ್ಲಿ ಡಿ ಕೆ ಶಿವಕುಮಾರ್ ಅವರಿಗೆ ಸಮರ್ಥ ಎದುರಾಳಿಯಾಗುವ ಭರವಸೆಯನ್ನು ವಿಶ್ವನಾಥ್ ಮೂಡಿಸಿದ್ದರು. ಆದರೆ ಬದಲಾದ ಪರಿಸ್ಥಿತಿಗಳಿಂದ ಡಿ ಎಂ ವಿಶ್ವನಾಥ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ಕನಕಪುರ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿ ಕೇವಲ 7 ಸಾವಿರ ಅಂತರದಿಂದ ಸೋಲು ಅನುಭಸಿದ್ದರು. ವಿಶ್ವನಾಥ್ ತಂದೆ, ಅವರ ತಾತ ನನ್ನ ಪರ ಚುನಾವಣೆ ಪ್ರಚಾರ ಮಾಡಿದ್ದಾರೆ. ಆದರೆ ಜೆಡಿಎಸ್ನಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಹೋಗಿದ್ದರು. ಆದರೆ ಈ ರಾಜ್ಯ, ನಮ್ಮ ಜಿಲ್ಲೆ ಹಾಗೂ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


