ಕೊನೆಗೂ ತಾವು ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ, ಕೋಲಾರದಿಂದಲೇ ಕಣಕ್ಕೆ
ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ...

ಕೋಲಾರ: ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ ಸೋಮವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಇಂದು ನಗರದ ಮಿನಿ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ ಎಂದರು.
ಇಲ್ಲಿ ಯಾವುದೇ ಕಾರಣಕ್ಕೂ ತಪ್ಪು ಸಂದೇಶ ಹೋಗಬಾರದು. ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ. ಸಿದ್ದರಾಮಯ್ಯ ಇಲ್ಲಿ ಬರೋದಿಲ್ಲ, ಜನರ ಕಷ್ಟ ಸುಖ ಕೇಳೋದಿಲ್ಲ. ಸಿದ್ದರಾಮಯ್ಯ ಹೊರಗಿನವರು ಅಂತ ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


