1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿ ಆಗಿದೆ, ಆಸ್ತಿ ಜಪ್ತಿಗೆ ಹೆದರಲ್ಲ: ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.

ಕೊಪ್ಪಳ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.
ಅಕ್ರಮ ಗಣಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಸೇರಿದ 219 ಹೆಚ್ಚುವರಿ ಆಸ್ತಿಗಳ ಜಪ್ತಿಗಾಗಿ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರೆಡ್ಡಿ, ನಾನು ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು. ಆಸ್ತಿ ಜಪ್ತಿಗೆ ಹೆದರುವುದಿಲ್ಲ ಎಂದರು.
ಇಂದು ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ನನ್ನ ಬಂಧನದ ಸಮಯದಲ್ಲಿ 1,200 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್ನಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ 4,000 ಕೋಟಿಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ನನ್ನ ಕಣ್ಣೀರು 12 ವರ್ಷದ ಹಿಂದೆಯೇ ಮುಗಿದಿದೆ ಎಂದು ಹೇಳಿದರು.
ಯಾರೂ ಏನೇ ಮಾಡಿದ್ರೂ ನಾನು ಮತ್ತೆ ರಾಜಕೀಯಕ್ಕೆ ಬಂದಿದ್ದೇನೆ. ಗಂಗಾವತಿ ಅಭಿವೃದ್ಧಿ ಮಾಡೋದೆ ನನ್ನ ಗುರಿ. ಚುನಾವಣೆಗೆ ಇನ್ನೂ 3 ತಿಂಗಳಿದೆ, ಏನೇನು ಆಗುತ್ತೋ ನೋಡೋಣ. ನನ್ನ ಮೇಲೆ ಕೋರ್ಟ್ನಲ್ಲಿ ಆರೋಪವಿದೆ, ಅದೆಲ್ಲ ಬಯಲಿಗೆ ಬರುತ್ತೆ. ಅದು ಗೊತ್ತಾದ ಮೇಲೆಯೇ ನನ್ನ ಉಸಿರು ಹೋಗೋದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


