ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ: ಅರಸೀಕೆರೆ 'ಅರಸ' ಆಗ್ತಾರಾ ಪ್ರಜ್ವಲ್ ರೇವಣ್ಣ?
ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.

ಚಾಮರಾಜನಗರ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಶೀಘ್ರದಲ್ಲೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆದಿದೆ. ಅವರು ಸಹ ಜೆಡಿಎಸ್ ತೊರೆಯಲು ಸಿದ್ಧರಿದ್ದಾರೆ ಅಂತ ಧ್ರುವನಾರಾಯಣ್ ಹೇಳಿದ್ದಾರೆ.
ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬುದನ್ನು ಕಳೆದ ಭಾರಿಯೇ ಜನರು ಅರ್ಥ ಮಾಡಿಕೊಂಡಿದ್ದರು. ಈ ಭಾರಿಯೂ ಅರ್ಥ ಮಾಡಿಕೊಂಡಿದ್ದಾರೆ. ಇದು ರಾಜ್ಯದ ಜನರಿಗೂ ಗೊತ್ತಿದೆ. ಸ್ಥಳೀಯವಾಗಿ ವಿರೋಧ ಹೇಳಿಕೆ ಮಾತ್ರ ಕೊಟ್ಟಿರಬಹುದು ಎಂದು ಆರೋಪಿಸಿದರು.
ಮಾಜಿ ಸಚಿವ ಎ.ಮಂಜು ಕೆಪಿಸಿಸಿಗೆ ಅರ್ಜಿ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆ. ಶಾಸಕ ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಪಕ್ಷಕ್ಕೆ ಬರುವ ನಿರೀಕ್ಷೆಯಿದೆ. ಅರಕಲಗೂಡು ಶಾಸಕರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇವತ್ತು ಜೆಡಿಎಸ್ ನಲ್ಲಿದ್ದೇನೆ, ಜೆಡಿಎಸ್ ಗೆ ಮತ ಹಾಕಿದ್ದೇನೆ, ಮುಂದೇನಾಗುತ್ತೋ ನೋಡೋಣ: ಶಾಸಕ ಶಿವಲಿಂಗೇಗೌಡ
ಶಿವಲಿಂಗೇಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅಂತಿಮ ಹಂತದ ಕಸರತ್ತು ನಡೆಸುತ್ತಿರುವ ಶಾಸಕ ಎಚ್.ಡಿ. ರೇವಣ್ಣ, ಕ್ಷೇತ್ರದ ಕಾರ್ಯಕರ್ತರಿಂದಲೇ ಶಿವಲಿಂಗೇಗೌಡರಿಗೆ ಮನವಿ ಮಾಡಿಸಿದ್ದಾರೆ. ಅದಾಗ್ಯೂ ಶಿವಲಿಂಗೇಗೌಡರು ಪಕ್ಷ ತ್ಯಜಿಸುವ ನಿರ್ಧಾರ ಪ್ರಕಟಿಸಿದರೆ, ತಕ್ಕ ಪಾಠ ಕಲಿಸುವ ಯೋಜನೆಯನ್ನೂ ರೂಪಿಸಿದ್ದಾರೆ.
ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾದರೆ, ಸಂಸದ ಪ್ರಜ್ವಲ್ ರೇವಣ್ಣ ಅರಸೀಕೆರೆಯ ಜೆಡಿಎಸ್ ಅಭ್ಯರ್ಥಿಯಾಗುವುದು ನಿಶ್ಚಿತ ಎನ್ನಲಾಗುತ್ತಿದೆ. ಈಗಾಗಲೇ ಅರಸೀಕೆರೆಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಜ್ವಲ್ ರೇವಣ್ಣ ಅವರನ್ನೇ ಕಣಕ್ಕೆ ಇಳಿಸುವಂತೆ ಜೆಡಿಎಸ್ ಕಾರ್ಯಕರ್ತರು ಸಲಹೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


