ರಾಜಕೀಯ

2024ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ

2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ
ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ
Published On :

ಮಂಡ್ಯ: 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಹೊಂದಾಣಿಕೆ ರಾಜಕೀಯ ಮಾಡುತ್ತಿವೆ ಎಂಬ ಸುಮಲತಾ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕಾರಣ ಎನ್ನುವುದು 2019ರ ಲೋಕಸಭಾ ಚುನಾವಣೆಯಲ್ಲಿಯೇ ಪ್ರಾರಂಭವಾಗಿದೆ ಎಂದರು. 

 ರೈತ ಸಂಘ, ಕಾಂಗ್ರೆಸ್, ಬಿಜೆಪಿಯವರು ಕೇವಲ ಲೋಕಸಭಾ ಚುನಾವಣೆ ಅಷ್ಟೇ ಅಲ್ಲ ವಿಧಾನಪರಿಷತ್  ಚುನಾವಣೆಯಲ್ಲಿ ಯಾರು ಹೊಂದಾಣಿಕೆ ರಾಜಕಾರಣ ಮಾಡಿದ್ರು ಎನ್ನುವುದು ಇಡೀ ರಾಜ್ಯವೇ ನೋಡಿದೆ. ಹೊಂದಾಣಿಕೆ ಬಗ್ಗೆ ಸಂಸದರಿಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಮಂಡ್ಯ ಸಂಸದರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಲ್ಲ, ಬೆಂಗಳೂರಿನಲ್ಲಿ ಸ್ಪರ್ಧೆ ಮಾಡಬೇಕು ಎಂದು ಚರ್ಚಿಸುತ್ತಿದ್ದಾರೆ. ಮೊದಲು ಅದರ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಇನ್ನೂ ಸ್ಯಾಂಟ್ರೋ ರವಿ ಬಂಧನ ಕುರಿತಂತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಸರ್ಕಾರದ ಕೆಲವು ಸಚಿವರ ಜೊತೆಗಿನ ನಂಟಿನ ಬಗ್ಗೆ ನಮ್ಮ ತಂದೆ ಸಂಪೂರ್ಣ ಮಾಹಿತಿ ಬಿಟ್ಟಿಟ್ಟಿದ್ದಾರೆ. ಬಿಜೆಪಿಯವರು ಸ್ಯಾಂಟ್ರೋ ರವಿ ಪ್ರಕರಣವನ್ನು ಯಾವ ರೀತಿ ತನಿಖೆ ನಡೆಸುತ್ತಾರೆ ಅನ್ನುವುದನ್ನು ಕಾದು ನೋಡಬೇಕಿದೆ. ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.