ರಾಜಕೀಯ

ರಾಜಸ್ಥಾನ: ಸಚಿನ್ ಪೈಲಟ್ ನಡೆಯನ್ನು ದೆಹಲಿಯಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್

ಸಚಿನ್ ಪೈಲಟ್ ತಮ್ಮ ಯುವ ಮತ್ತು ರೈತರ ರ‍್ಯಾಲಿಗೆ ಏಕಾಂಗಿಯಾಗಿ ಹೋಗಲು ನಿರ್ಧರಿಸಿದ ನಂತರ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅವರ ಭಿನ್ನಾಭಿಪ್ರಾಯಗಳು ಶಮನವಾಗದ ಕಾರಣ ಕಾಂಗ್ರೆಸ್ ಅವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ರಾಜಸ್ಥಾನ: ಸಚಿನ್ ಪೈಲಟ್ ನಡೆಯನ್ನು ದೆಹಲಿಯಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್
ಸಿಎಂ ಅಶೋಕ್ ಗೆಹ್ಲೊಟ್ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
Published On :

ನವದೆಹಲಿ: ಸಚಿನ್ ಪೈಲಟ್ ತಮ್ಮ ಯುವ ಮತ್ತು ರೈತರ ರ‍್ಯಾಲಿಗೆ ಏಕಾಂಗಿಯಾಗಿ ಹೋಗಲು ನಿರ್ಧರಿಸಿದ ನಂತರ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅವರ ಭಿನ್ನಾಭಿಪ್ರಾಯಗಳು ಶಮನವಾಗದ ಕಾರಣ ಕಾಂಗ್ರೆಸ್ ಅವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಇಬ್ಬರ ನಡುವೆ ನಡೆಯುತ್ತಿರುವ ಉದ್ವಿಗ್ನತೆಯು ಕಾಂಗ್ರೆಸ್‌ಗೆ ಕಳವಳಕ್ಕೆ ಪ್ರಮುಖ ಕಾರಣವಾಗಿದ್ದು, ಗೆಹ್ಲೋಟ್ ಮತ್ತು ಪೈಲಟ್ ಇಬ್ಬರನ್ನೂ ಪಕ್ಷದ ಆಸ್ತಿ ಎಂದು ಬಣ್ಣಿಸಿದೆ.

ಪೈಲಟ್ ಪಕ್ಷದ ವಿರುದ್ಧ ಹೋಗುತ್ತಾರ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ನಾಯಕತ್ವ ತಳ್ಳಿಹಾಕಿದೆ. ಆದರೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಜಸ್ಥಾನದ ವಿಚಾರದ ಕುರಿತು ಪಕ್ಷದ ಅಧ್ಯಕ್ಷರು ಕೆಲಸ ಮಾಡುತ್ತಿದ್ದಾರೆ ಮತ್ತು ಕೆಲವು ಪರಿಹಾರಗಳನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ. ಆದರೆ, ಅವರು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಕಾಂಗ್ರೆಸ್ ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ಅಜಯ್ ಮಾಕೆನ್ ಅವರನ್ನು ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಿದ್ದು, ಇದರಿಂದಾಗಿ ಸಮಸ್ಯೆಯನ್ನು ಸದ್ಯಕ್ಕೆ ನಿವಾರಿಸಬಹುದು. ಆದರೆ, ಪೈಲಟ್ ಪಂಜಾಬ್‌ನಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುವ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಒತ್ತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದಲ್ಲಿನ ನಾಯಕತ್ವದ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಲ್ಲಿಯವರೆಗೆ, ಗೆಹ್ಲೋಟ್-ಪೈಲಟ್ ಸಮಸ್ಯೆಯನ್ನು ಪರಿಹರಿಸಲು ಕಾಂಗ್ರೆಸ್ ಉನ್ನತ ನಾಯಕತ್ವದಿಂದ ಯಾವುದೇ ಸ್ಪಷ್ಟನೆ ಲಭ್ಯವಾಗಿಲ್ಲ. ಈ ಹಂತದಲ್ಲಿ ಕಾಂಗ್ರೆಸ್ ಯಾವುದೇ ಬಣವನ್ನು ವಿರೋಧಿಸಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿಯವರೆಗೂ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆಯೇ ಅಥವಾ ಚುನಾವಣೆಗೂ ಮುನ್ನ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆಯೇ ಎನ್ನುವ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಪಕ್ಷವು ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತಿದೆ ಮತ್ತು ಅದರಂತೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಜನವರಿ 16 ರಿಂದ ರಾಜಸ್ಥಾನದ ನಾಗೌರ್, ಹನುಮಾನ್‌ಗಢ್, ಜುಂಜುನು ಮತ್ತು ಪಾಲಿಯಲ್ಲಿ ಸಚಿನ್ ಪೈಲಟ್ ರ‍್ಯಾಲಿಗಳನ್ನು ನಡೆಸಲಿದ್ದು, ಜನವರಿ 20 ರಂದು ಜೈಪುರದಲ್ಲಿ ಯುವ ಸಮಾವೇಶವನ್ನು ನಡೆಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.