ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ನೀಡುವ 'ಗೃಹಲಕ್ಷ್ಮಿ' ಯೋಜನೆ; ಕಾಂಗ್ರೆಸ್ ಭರವಸೆ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ.
ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ 'ಗೃಹಲಕ್ಷ್ಮಿ' ಯೋಜನೆಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ನಾ ನಾಯಕಿ' ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000 ನೀಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


