ರಾಜಕೀಯ

10 ಬಾರಿ ಅಲ್ಲ ಅಮಿತ್ ಶಾ 15 ಬಾರಿ ಬಂದ್ರೂ ಮಂಡ್ಯ ದೇವೇಗೌಡರ ಕ್ಷೇತ್ರ ಅಷ್ಟೇ; ಕೋಲಾರ ಸಿಲ್ಕು-ಮಿಲ್ಕು ಕ್ಷೇತ್ರ: ಪ್ರಜ್ವಲ್ ರೇವಣ್ಣ

ಕೇಂದ್ರ ಗೃಹ ಸಚಿವ ಅಮಿತ್‌ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

10 ಬಾರಿ ಅಲ್ಲ ಅಮಿತ್ ಶಾ 15 ಬಾರಿ ಬಂದ್ರೂ ಮಂಡ್ಯ ದೇವೇಗೌಡರ ಕ್ಷೇತ್ರ ಅಷ್ಟೇ; ಕೋಲಾರ ಸಿಲ್ಕು-ಮಿಲ್ಕು ಕ್ಷೇತ್ರ: ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Published On :

ಕೋಲಾರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಮಂಡ್ಯಕ್ಕೆ ಒಂದು ಬಾರಿ ಬಂದಾಗಲೇ ಬಾಂಬ್ ಒಂದನ್ನು ಹಾಕಿ ಹೋಗಿದ್ದಾರೆ. ಅಮುಲ್‌ಗೆ ನಂದಿನಿಯನ್ನು ಸೇರಿಸುತ್ತೇವೆ ಎಂದು, ಅದು ಯಾರಪ್ಪನ ಆಸ್ತಿ ಎಂದು ಪ್ರಶ್ನಿಸಿದ್ದಾರೆ.

ನಂದಿನಿ ಎಂಬ ಬಡ ಸಂಸ್ಥೆಯನ್ನು ನಮ್ಮ ರೈತರು, ಸಾರ್ವಜನಿಕರು ಇಷ್ಟು ದೊಡ್ಡ ಮಟ್ಟಕ್ಕೆ ಶಕ್ತಿಯಾಗಿ ಬೆಳೆಸಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಸಚಿವರಿಗೆ ಸಮಾನವಾಗಿದೆ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಡೈರಿ ಸ್ಥಾಪನೆಯಾಗಿರುವುದರಿಂದಲೇ ಸಿಲ್ಕ್-ಮಿಲ್ಕ್-ಚಿನ್ನಕ್ಕೆ ಹೆಸರುವಾಸಿಯಾಗಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

‘ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಅವರ ವೈಯಕ್ತಿಕ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಆದರೆ, ಅವರನ್ನು ಇಲ್ಲಿಗೆ ಕರೆ ತಂದು ಹರಕೆ ಕುರಿ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಒಬ್ಬ ಹಿರಿಯ ನಾಯಕರು, ಮಾರ್ಗದರ್ಶನ ಕೊಡುವವರಿಗೆ ನಾವು ಮೊದಲಿನಿಂದಲೂ ಗೌರವ ನೀಡುತ್ತಾ ಬಂದಿರುವುದು ನಮ್ಮ ಸಂಪ್ರದಾಯ. ಸಿದ್ದರಾಮಯ್ಯ ಗೆಲ್ಲಬೇಕು, ಸೋಲಬೇಕು ಎನ್ನುವ ವಿಚಾರ ನಮ್ಮ ಬಳಿ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.