ರಾಜಕೀಯ

'ಪಕ್ಕದ ಮನೆಯ ಅಡುಗೆಯ ಪರಿಮಳ ನಮ್ಮದೇ ಎನ್ನಿ; ಹೀಗೆ ಖಾಲಿ ಡಬ್ಬ ಬಡಿಯುತ್ತಾ ,ಯಾರೊ ಮಾಡಿದ ಕೆಲಸಕ್ಕೆ ನಾಮಕರಣ ಮಾಡುತ್ತಿರಿ'

ಕರ್ನಾಟಕ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರು ಖಾಲಿಯಾಗಿರುವ ಅಡುಗೆ ಮನೆಯ ಡಬ್ಬ ಅಲ್ಲಾಡಿಸಿ, ಪಕ್ಕದ ಮನೆಯಿಂದ ಬರುವ ಅಡುಗೆಯ ಪರಿಮಳ ನಮ್ಮ‌ ಮನೆಯದ್ದೇ ಎಂದು ಹೇಳಿಕೊಂಡು ಓಡಾಡುತ್ತೀರಿ ಎಂದು ಲೇವಡಿ ಮಾಡಿದ್ದಾರೆ.

'ಪಕ್ಕದ ಮನೆಯ ಅಡುಗೆಯ ಪರಿಮಳ ನಮ್ಮದೇ ಎನ್ನಿ; ಹೀಗೆ ಖಾಲಿ ಡಬ್ಬ ಬಡಿಯುತ್ತಾ ,ಯಾರೊ ಮಾಡಿದ ಕೆಲಸಕ್ಕೆ ನಾಮಕರಣ ಮಾಡುತ್ತಿರಿ'
ಸಿದ್ದರಾಮಯ್ಯ
Published On :

ಬೆಂಗಳೂರು: ಸಿದ್ದರಾಮ್ಯನವರೇ ನಮ್ಮ ಸರ್ಕಾರ ಯಾವುದೇ ಜನಪರ ಕಾರ್ಯಕ್ರಮ ಮಾಡಲಿ, ಅದನ್ನು ನಾನು ಅಧಿಕಾರದಲ್ಲಿದ್ದಾಗಲೇ ಯೋಚನೆ ಮಾಡಿದ್ದೆ ಅನ್ನುತ್ತೀರಿ. ನಿಮ್ಮದು ಬರೀ ಯೋಚನೆ ಮಾತ್ರ, ಯೋಜನೆ, ಕಾರ್ಯರೂಪ ಇಲ್ಲ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರು ಖಾಲಿಯಾಗಿರುವ ಅಡುಗೆ ಮನೆಯ ಡಬ್ಬ ಅಲ್ಲಾಡಿಸಿ, ಪಕ್ಕದ ಮನೆಯಿಂದ ಬರುವ ಅಡುಗೆಯ ಪರಿಮಳ ನಮ್ಮ‌ ಮನೆಯದ್ದೇ ಎಂದು ಹೇಳಿಕೊಂಡು ಓಡಾಡುತ್ತೀರಿ ಎಂದು ಲೇವಡಿ ಮಾಡಿದ್ದಾರೆ.

ಬಂಜಾರ ಸಮುದಾಯದವರದ್ದು ಸುಮಾರು 20-30 ವರ್ಷ ಹಳೆಯ ಬೇಡಿಕೆಯಾಗಿತ್ತು. ನೀವೆಲ್ಲರೂ ಬರಿ ಆಶ್ವಾಸನೆ ಕೊಡುವುದರಲ್ಲಿಯೇ ಕಾಲ ಕಳೆದಿರಿ. ನಮ್ಮ ಸರ್ಕಾರ ಬಂದ ಮೇಲೆ ಪ್ರಾಥಮಿಕ ಹಾಗೂ‌ ಅಂತಿಮ ಅಧಿಸೂಚನೆ ಹೊರಡಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡಿ 52,072 ಕುಟುಂಬಕ್ಕೆ ಹಕ್ಕುಪತ್ರ ನೀಡಿದ್ದೇವೆ.

ಮುಂದೆ ದಾವಣಗೆರೆಯಲ್ಲಿಯೂ ಇದೇ ರೀತಿ ಕಾರ್ಯಕ್ರಮ ಮಾಡಿ, ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಹಕ್ಕುಪತ್ರ ನೀಡುತ್ತೇವೆ. ಆಗ ಯಾವ ಹೇಳಿಕೆ ನೀಡಬೇಕು ಎಂದು ಯೋಚಿಸಿ ಸಿದ್ಧರಾಗಿ ಸಿದ್ದರಾಮಯ್ಯನವರೇ. 75 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಹಿಂದುಳಿದವರ ಕಲ್ಯಾಣದ ಹೆಸರಲ್ಲಿ ಮತ ಪಡೆದಿರಿ. ಅಧಿಕಾರ ಅನುಭವಿಸಿದ್ದೀರಿ. ಆದರೆ ಜನಕಲ್ಯಾಣದ ಮಾತು ದೂರವೇ ಉಳಿಯಿತು. ನಿಮ್ಮದು ಮತ ಬ್ಯಾಂಕ್ ರಾಜಕೀಯ. ನಮ್ಮದು ಅಭಿವೃದ್ಧಿ ಪಥದ ರಾಜಕೀಯ ಎಂದು ಟಾಂಗ್ ನೀಡಿದ್ದಾರೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ತತ್ವದಡಿ ನಾವು ಮುಂದೆ ಸಾಗುತ್ತೇವೆ. ಇಷ್ಟಾಗಿಯೂ, ನೀವು ಮತ್ತು ನಿಮ್ಮ ಪಕ್ಷ ಹೀಗೆ ಖಾಲಿ ಡಬ್ಬ ಬಡಿಯುತ್ತಾ, ಯಾರೊ ಮಾಡಿದ ಕೆಲಸಕ್ಕೆ ನಾಮಕರಣ ಮಾಡುತ್ತಾ ಸಾಗುತ್ತಿರೋ ಅಥವಾ ಸುಳ್ಳು ಹೇಳುವುದನ್ನು ನಿಲ್ಲಿಸಿ ಅಭಿವೃದ್ಧಿಗೆ ಬೆಂಬಲಿಸುತ್ತೀರೋ ಸರಿಯಾಗಿ ಯೋಚಿಸಿ ಎಂದು ಅಶೋಕ್ ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.