ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ನಾನೂ ಅವರ ಪರ ಪ್ರಚಾರ ಮಾಡುತ್ತೇನೆ: ಎಚ್.ವಿಶ್ವನಾಥ್
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ...

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ ಮತ್ತು ನಾನೂ ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ ಗೆಲ್ಲುತ್ತಾರೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಿದ್ದರಾಮಯ್ಯನವರೇ ಪ್ಲಸ್ ಪಾಯಿಂಟ್ ಎಂದರು.
ಇದೇ ವೇಳೆ ತಾವು ಕಾಂಗ್ರೆಸ್ ಸೇರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಶ್ನನಾಥ್ ಅವರು, ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಕೆಲವು ತಾಂತ್ರಿಕ ದೋಷಗಳಿವೆ. ನಾನು ಸ್ವತಂತ್ರ, ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಆದರೆ ನಾನು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಈಗಾಗಲೇ ನಾನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ನಾನು ಕಾಂಗ್ರೆಸ್ ಗೆ ಬೆಂಬಲ ಕೊಡುತ್ತೇನೆ ಎಂದರು.
ಇನ್ನು ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರಾ ಎಂಬ ಪ್ರಶ್ನೆಗೆ, ಇನ್ನೂ ಚುನಾವಣೆ ಆಗಿಲ್ಲ. ಚುನಾವಣೆ ಆದಮೇಲೆ ಗೊತ್ತಾಗುತ್ತದೆ ಎಂದು ವಿಶ್ವನಾಥ್ ಜಾರಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


