ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿ ಇದೆ, ಸರಿಯಾದ ಬಟನ್ ಒತ್ತಿ: ಜೆಪಿ ನಡ್ಡಾ
ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಂಡು ಇಎವಿಂ ಬಟನ್ ಒತ್ತಿದರೆ ಜನಸ್ನೇಹಿ ಸರ್ಕಾರ ಬರುತ್ತದೆ. ಆದರೆ, ತಪ್ಪು ಬಟನ್ ಒತ್ತಿದರೆ ಜನವಿರೋಧಿ ನೀತಿಗೆ ಬಲಿಯಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ವಿಜಯಪುರ: ಚುನಾವಣೆಯಲ್ಲಿ ಮತದಾರರ ಬೆರಳಿಗೆ ಅಗಾದ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಂಡು ಇಎವಿಂ ಬಟನ್ ಒತ್ತಿದರೆ ಜನಸ್ನೇಹಿ ಸರ್ಕಾರ ಬರುತ್ತದೆ. ಆದರೆ, ತಪ್ಪು ಬಟನ್ ಒತ್ತಿದರೆ ಜನವಿರೋಧಿ ನೀತಿಗೆ ಬಲಿಯಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ವಿಜಯಪುರದಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಜನರಲ್ಲಿ ವೈಷಮ್ಯವನ್ನು ಹುಟ್ಟು ಹಾಕಿದರೆ, ಬಿಜೆಪಿ ಹುಟ್ಟು ಹಾಕುತ್ತಿದೆ ಎಂದರು. ಕಾಂಗ್ರೆಸ್ ಕುಟುಂಬ ರಾಜಕಾರಣದೊಂದಿಗೆ ಜಾತಿ ರಾಜಕಾರಣ ಮಾಡುತ್ತಿದೆ. ಆದರೆ, ಬಿಜೆಪಿ ಎಲ್ಲರೊಂದಿಗೆ ಎಲ್ಲರ ವಿಶ್ವಾಸ ಎಂಬ ಧ್ಯೆಯೇದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯ, ಮೌಲ್ಯಗಳ ಬಗ್ಗೆ ಮಾತನಾಡಿದರೆ, ರಾಹುಲ್ ಗಾಂಧಿ ದೇಶ ವಿಭಜನೆಯತ್ತ ಸಾಗುತ್ತಿದ್ದಾರೆ ಎಂದು ಆರೋಪಿಸಿದರು. ಕರ್ನಾಟಕದ ಸಂಸ್ಕೃತಿ, ವಿಚಾರಣೆ ಮತ್ತು ಅಭಿವೃದ್ಧಿ ಸುರಕ್ಷಿತವಾಗಿದೆಯೆಂದರೆ ಅದು ಬಿಜೆಪಿ ಅವಧಿಯಲ್ಲಿ ಹೊರತು ಬೇರೆ ಯಾವ ಅವಧಿಯಲ್ಲೂ ಅಲ್ಲ ಎಂದು ತಿಳಿಸಿದರು.
ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ರಾಜ್ಯಗಳಲ್ಲಿ ಒಂದಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಮರೆಯಲಾಗದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


