ಕಾಂಗ್ರೆಸ್ ವಿರುದ್ಧ ಕೌಂಟರ್ ಅಟ್ಯಾಕ್ ಮಾಡದೆ ಮೂಕ ಪ್ರೇಕ್ಷಕರಾಗಿರುವುದು ನಮ್ಮ ದೌರ್ಭಾಗ್ಯ: ಬಿಜೆಪಿ ದೌರ್ಬಲ್ಯ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ
ಸರ್ಕಾರ, ಬಿಜೆಪಿ ವಿರುದ್ಧ ಬೇರೆಯವರು ಆರೋಪ ಮಾಡುತ್ತಿದ್ದರೂ ನಾವು ‘ಕೌಂಟರ್ ಅಟ್ಯಾಕ್’ ಮಾಡುತ್ತಿಲ್ಲ. ತೀವ್ರತರ ವಾಗ್ದಾಳಿ ನಡೆಸುತ್ತಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

ತುಮಕೂರು: ‘ಸರ್ಕಾರ, ಬಿಜೆಪಿ ವಿರುದ್ಧ ಬೇರೆಯವರು ಆರೋಪ ಮಾಡುತ್ತಿದ್ದರೂ ನಾವು ‘ಕೌಂಟರ್ ಅಟ್ಯಾಕ್’ ಮಾಡುತ್ತಿಲ್ಲ. ತೀವ್ರತರ ವಾಗ್ದಾಳಿ ನಡೆಸುತ್ತಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಳಲು ತೋಡಿಕೊಂಡಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕು ಮತಿಘಟ್ಟ ಗ್ರಾಮದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡುವ ಸಮಯದಲ್ಲಿ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಾವು ರಾಜ್ಯದಲ್ಲಿ ಮತ್ತೇ ಬಿಜೆಪಿ ಸರ್ಕಾರ ತರಲೇಬೇಕು. ನಾವೆಲ್ಲ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ. ಸರ್ಕಾರದ ವಿರುದ್ಧ ಮಾತನಾಡಿದಾಗ ನಾವೇ ಜಿಜ್ಞಾಸೆಗೆ ಒಳಗಾಗುತಿದ್ದೇವೆ. ನೀವೇನು ಎಂದು ನಾವು ವಾಪಸ್ ಕೇಳುತ್ತಿಲ್ಲ. ವಿರುದ್ಧ ಮಾತನಾಡಿದವರಿಗೆ ನಾವು ಮರು ಪ್ರಶ್ನೆ ಹಾಕಲ್ಲ. ನಾವು ಕಾಂಗ್ರೆಸ್‍ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ ಎಂದು ತಮ್ಮ ಪಕ್ಷದ ದೌರ್ಬಲ್ಯವನ್ನು ಸಚಿವ ಮಾಧುಸ್ವಾಮಿ ಹೊರ ಹಾಕಿದ್ದಾರೆ.
ನೀವೇನು ಎಂದು ನಾವು ವಾಪಸ್ ಕೇಳುತ್ತಿಲ್ಲ. ವಿರುದ್ಧ ಮಾತನಾಡಿದವರಿಗೆ ಮರು ಪ್ರಶ್ನೆ ಹಾಕಲ್ಲ. ನಾವು ಕಾಂಗ್ರೆಸ್‍ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ. ನಾವು ಗಟ್ಟಿ ಧ್ವನಿಯಲ್ಲಿ ನಮ್ಮ ಸಾಧನೆಯನ್ನು ಹೇಳಿಕೊಳ್ಳಬೇಕಾಗಿದೆ. ಆಗ ಅವರು ಬಾಯಿ ಮುಚ್ಚಿಕೊಳ್ತಾರೆ. ವಿರೋಧಿಗಳನ್ನು ಆಡೋಕೆ ಬಿಟ್ಟರೆ ಅವರು ಆಡ್ತಾನೆ ಇರುತ್ತಾರೆ. ಅಮಾಯಕ ಜನರಿಗೆ ವಿರೋಧಿಗಳು ಹೇಳೋದೆ ಸತ್ಯ ಎನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಕೋರ್ಟ್‍ನಲ್ಲಿ ಎದುರು ಪಾರ್ಟಿ ವಿಚಾರಣೆಗೆ ಹಾಜರಾಗದೇ ಇದ್ರೆ ಇನ್ನೊಂದು ಪಾರ್ಟಿ ಪರ ಆದೇಶ ಆಗುತ್ತದೆ. ನಮ್ಮ ಪಕ್ಷದಲ್ಲಿ ಎಕ್ಸ್ ಪಾರ್ಟಿ ಡಿಸಿಷನ್ ಆಗಬಾರದು. ಹಗಲು ಕಳ್ಳರು, ಬೆಳಗ್ಗೆ ಕನ್ನ ಹಾಕಿದವರು ರಾತ್ರಿ ಕಳ್ಳನ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‍ನವರೇ ಹಗಲು ಗಳ್ಳರು ಇವರು ನಮ್ಮ ಸುದ್ದಿ ಮಾತಾಡೋ ಸ್ಥಿತಿ ನಿರ್ಮಾಣ ಆಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ ಅಭಿವೃದ್ಧಿ ಪದದ ಕಾಗುಣಿತ ಗೊತ್ತಿಲ್ಲದ ವ್ಯಕ್ತಿ ನನ್ನ ಎದುರಾಳಿ ಎಂದು ಗುಡುಗಿದ್ದಾರೆ.
ನಾವು ಗಟ್ಟಿ ಧ್ವನಿಯಲ್ಲಿ ನಮ್ಮ ಸಾಧನೆಯನ್ನು ಹೇಳಿಕೊಳ್ಳಬೇಕಾಗಿದೆ. ಆಗ ಅವರು ಬಾಯಿ ಮುಚ್ಚಿಕೊಳ್ಳುತ್ತಾರೆ. ವಿರೋಧಿಗಳನ್ನು ಆಡೋಕೆ ಬಿಟ್ಟರೆ ಅವರು ಆಡ್ತಾನೆ ಇರುತ್ತಾರೆ. ಅಮಾಯಕ ಜನರಿಗೆ ವಿರೋಧಿಗಳು ಹೇಳುವುದು ಸತ್ಯ ಎನ್ನಿಸುತ್ತದೆ. ಕೋರ್ಟ್‌ನಲ್ಲಿ ಪ್ರತಿವಾದಿಗಳ ವಿಚಾರಣೆ ವೇಳೆ ಹಾಜರಾಗದಿದ್ದರೆ, ಅವರ ಪರ ಆದೇಶವಾಗುತ್ತದೆ. ನಮ್ಮ ಪಕ್ಷದಲ್ಲಿ ಎಕ್ಸ್ ಪಾರ್ಟಿ ಡಿಸಿಷನ್ ಆಗಬಾರದು. ಹಗಲು ಕಳ್ಳರು, ರಾತ್ರಿ ಕಳ್ಳನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.
ಚಿಕ್ಕನಾಯಕನಹಳ್ಳಿಯಲ್ಲಿ ಅಭಿವೃದ್ಧಿ ಪದದ ಕಾಗುಣಿತ ಗೊತ್ತಿಲ್ಲದ ವ್ಯಕ್ತಿ ನನ್ನ ಎದುರಾಳಿಯಾಗಿದ್ದಾರೆ. ಹಾಗಾಗಿ ನೀವೇ ಚಿಕ್ಕನಾಯಕನಹಳ್ಳಿಯಿಂದ ಸ್ಪರ್ಧೆ ಮಾಡಿ ಎಂದು ಸಿದ್ದರಾಮಯ್ಯನವರ ಬಳಿ ಕೇಳಿದ್ದೇನೆ. ಆಗ ಸಮಬಲದ ಹೋರಾಟ ನಡೆಯುತ್ತದೆ, ಇಬ್ಬರೂ ಸೆಣಸಾಡಲು ಗೌರವ ಇರುತ್ತದೆ. ಇಬ್ಬರು ಸರಿಯಾಗಿ ಕುಸ್ತಿ ಆಡಬಹುದು. ಆದರೆ, ಏನೂ ಗೊತ್ತಿಲ್ಲದವರ ಜತೆ ನಾನು ಸ್ಪರ್ಧೆ ಮಾಡಲು ನಿಂತಿದ್ದು ಯಾವ ಜನ್ಮದ ಪಾಪವೋ. ಇಂಥ ಕೆಟ್ಟ ಸ್ಥಿತಿ ನನಗೆ ಬರಬಾರದಿತ್ತು ಎಂದು ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ತಮಗೆ ಸರಿಸಮಾನನಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


