ವಂಚಕ ಅದಾನಿ ಕಂಪನಿಯಲ್ಲಿ ಸರ್ಕಾರಿ ಸ್ವಾಮ್ಯದ LIC ಹಣ ಹೂಡಿಕೆಗೆ ಒತ್ತಡ ಹೇರಿದವರು ಯಾರು?
ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರುಗಳು ಒಂದೇ ಸಮನೆ ಕುಸಿತ ಕಾಣುತ್ತಿದ್ದು,...

ಬೆಂಗಳೂರು: ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರುಗಳು ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದವರೂ ಇದೀಗ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.
ಇದನ್ನು ಓದಿ: ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ: ಆಸ್ತಿ ಮೌಲ್ಯ 18 ಶತಕೋಟಿ ಡಾಲರ್ ಗೆ ಕುಸಿತ
ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮವೂ (ಎಲ್‌ಐಸಿ)ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಭಾರೀ ನಷ್ಟ ಅನುಭವಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ವಂಚನೆಯ ಆರೋಪಕ್ಕೆ ಸಿಲುಕಿರುವ ಅದಾನಿ ಸಮೂಹದಿಂದ LICಯ ಸಾವಿರಾರು ಕೋಟಿ ಹಣ ಗುಳುಂ ಆಗಿದೆ ಎಂದು ಆರೋಪಿಸಿದೆ.
ಮಧ್ಯಮ ವರ್ಗದ ಶ್ರಮದ ದುಡಿಮೆಯ ಹಣವನ್ನು ವಂಚಕ ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಸರ್ಕಾರಿ ಸ್ವಾಮ್ಯದ LIC ಮೇಲೆ ಒತ್ತಡ ಹೇರಿದವರು ಯಾರು? ಎಂದು ಪ್ರಶ್ನಿಸಿದೆ. ಅಲ್ಲದೆ ಜನಸಾಮಾನ್ಯರ ಹಣಕ್ಕೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


