ರಾಜಕೀಯ

'ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ': ಜಾಹೀರಾತು ನೀಡಿದ ಕಾಂಗ್ರೆಸ್!

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆಯು ಬಿಜೆಪಿ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ.

'ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ': ಜಾಹೀರಾತು ನೀಡಿದ ಕಾಂಗ್ರೆಸ್!
ಕಾಂಗ್ರೆಸ್ ನೀಡಿರುವ ಜಾಹೀರಾತು ಪೋಸ್ಟರ್
Published On :

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆಯು ಬಿಜೆಪಿ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ. 

ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಪಟ್ಟಿ ಮಾಡಿದೆ.

ಆರ್‌ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿರುವ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಹೇಳಲಾಗಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು.

ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ ಎಂದು ಟೀಕಿಸಿದೆ.

ಮುಂದುವರಿದು, ಆಡಳಿತ ಮಾಡಲು ಬಿಜೆಪಿ ಪಕ್ಷ ಸಮರ್ಥವಲ್ಲ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ಆಸಮರ್ಥರು ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ, ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.