'ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ'
ಬಿಜೆಪಿ ನಾಯಕ ಸಿಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮೈಸೂರು: ಬಿಜೆಪಿ ನಾಯಕ ಸಿಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪಂಚೆ ರಾಜಕೀಯದ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚುನಾವಣೆಯಲ್ಲಿ ಈ ರೀತಿ ಮಾತಾಡಿ, ಮಾತಾಡಿ ಜನ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 65 ಸ್ಥಾನಕ್ಕೆ ಕುಸಿದಿರುವ ಬಿಜೆಪಿಯವರಲ್ಲಿ ಕಚ್ಚಾಟ ಇಲ್ವಾ? ನಮ್ಮಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ? ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತನಾಡುತ್ತಾರೆ ಎಂದು ಕುಟುಕಿದರು.
ಮನಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ. ಅದರಲ್ಲಿ ಒಬ್ಬರು, ಇಬ್ಬರು ಉಳಿದುಕೊಂಡಿದ್ದಾರೆ. ಜನ ಈಗ ಉತ್ತರ ಕೊಟ್ಟಿದ್ದಾರೆ. ನಮ್ಮ ಪಂಚೆ ಸರಿ ಮಾಡೊದು ಬೇಡ. ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ ಎಂದು ಸಿದ್ದು, ಡಿಕೆಶಿ ಪಂಚೆ ಬಗ್ಗೆ ಮಾತಾಡಿದ ಸಿ.ಟಿ ರವಿಗೆ ತಿರುಗೇಟು ಕೊಟ್ಟರು.
ದಿನ ಬೆಳಗಾದ್ರೆ ಜೆಡಿಎಸ್ ಹಾಗೂ ಬಿಜೆಪಿಯವರು ನಿಮ್ಮ ಮುಂದೆ ಏನೇನೋ ಮಾತಾಡಿ ಪ್ರಚಾರ ತಗೊಳೋಕೆ ನೋಡುತ್ತಾರೆ. ಗ್ಯಾರಂಟಿ ಯೋಜನೆಗಳು ಜಾರಿ ಆಗೋದೇ ಇಲ್ಲ ಅಂತ ಎರಡೂ ಪಕ್ಷ ಹೋರಾಟ ಮಾಡುತ್ತಿವೆ. ದೇಶದ ಇತಿಹಾಸದಲ್ಲೇ ಯಾವುದೇ ಸರ್ಕಾರ ಈ ರೀತಿ ಮಾಡಿದೆಯಾ? ಎಂದು ಚಾಟಿ ಬೀಸಿದರು.
ಜುಲೈ 4ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಧರಣಿ ವಿಚಾರ ಕುರಿತು ಮಾತನಾಡಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿ.ಟಿ ರವಿ ಎಲ್ಲರೂ ಬಂದು ಹೋರಾಟ ಮಾಡಲಿ ಎಂದು ಚಲುವರಾಯಸ್ವಾಮಿ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


