ರಾಜಕೀಯ

ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಸರ್ಕಾರ 'ಜನವಿರೋಧಿ'ಯಾಗಿದೆ: ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಜನವಿರೋಧಿಯಾಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ ಭರವಸೆಯಂತೆ ಐದು ಖಾತರಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಸರ್ಕಾರ 'ಜನವಿರೋಧಿ'ಯಾಗಿದೆ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳಲ್ಲೇ ಜನವಿರೋಧಿಯಾಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ ಭರವಸೆಯಂತೆ ಐದು ಖಾತರಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ ಸರ್ಕಾರವೊಂದು ಜನವಿರೋಧಿಯಾಗಿರುವುದು ಇದೇ ಮೊದಲು ಎಂದರು. ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣವನ್ನು 'ಹಿತಕರ' ಎಂದು ಕರೆದ ಬೊಮ್ಮಾಯಿ, ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಭರವಸೆ ಇಲ್ಲ. ರಾಜ್ಯಪಾಲರ ಭಾಷಣಕ್ಕೆ ಅರ್ಥವಿಲ್ಲ ಎಂದು ಹೇಳಿದರು.

'ಅಭಿವೃದ್ಧಿ ವಿಷಯದಲ್ಲಿ ಸರ್ಕಾರಕ್ಕೆ ನಿರ್ದೇಶನದ ಕೊರತೆ ಇದೆ. ಬಿಪಿಎಲ್ ಕುಟುಂಬಗಳಿಗೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿತ್ತು' ಎಂದು ಅನ್ನಭಾಗ್ಯ ಯೋಜನೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರವು 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದರೂ, ನಾಚಿಕೆಯಿಲ್ಲದ ರಾಜ್ಯ ಸರ್ಕಾರ ಅದನ್ನು ಉಲ್ಲೇಖಿಸುತ್ತಿಲ್ಲ. ಗೃಹ ಜ್ಯೋತಿ ಯೋಜನೆ ಮೂಲಕ ಸರ್ಕಾರ ಜನರನ್ನು ದಾರಿ ತಪ್ಪಿಸಿದೆ. ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಸರ್ಕಾರ ಈ ಮೊದಲು ಭರವಸೆ ನೀಡಿತ್ತು. ಆದರೆ, ನಂತರ ಸರ್ಕಾರವು ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆಯನ್ನು ತೆಗೆದುಕೊಳ್ಳುತ್ತದೆ ಮತ್ತು ಸರಾಸರಿ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ವಿದ್ಯುತ್ ಸೇರಿ ಉಚಿತ ವಿದ್ಯುತ್ ನೀಡುತ್ತದೆ ಎಂದು ಹೇಳಿದೆ. ಇದು ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದರು.

<strong>ಬೆಂಗಳೂರಿನಲ್ಲಿ ಸೋಮವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರೊಂದಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ವಿಧಾನಸೌಧ ಪ್ರವೇಶಿಸಿದರು.</strong>
ಬೆಂಗಳೂರಿನಲ್ಲಿ ಸೋಮವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರೊಂದಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ವಿಧಾನಸೌಧ ಪ್ರವೇಶಿಸಿದರು.

ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಮಾಜಿ ಸಿಎಂ ಮಾಡಿರುವುದು ಸಣ್ಣ ಪೋಸ್ಟಿಂಗ್‌ಗೆ 30 ಲಕ್ಷ ರೂ. ಲಂಚದ ಆರೋಪ ಇರಬಹುದು. ಆದರೆ, ವಾಸ್ತವದಲ್ಲಿ ಅದು ಕೋಟಿಗಟ್ಟಲೆ ಇದೆ. ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೇಳಿಕೆಗಳು ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಬೆಂಕಿಯಿಲ್ಲದೆ ಹೊಗೆ ಬರುವುದಿಲ್ಲ' ಎಂದು ಅವರು ಹೇಳಿದರು.

ವಿರೋಧ ಪಕ್ಷದ ನಾಯಕನ ನೇಮಿಸುವಲ್ಲಿ ಬಿಜೆಪಿಯ ವಿಳಂಬಕ್ಕೆ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯರನ್ನು ಲೇವಡಿ ಮಾಡಿದ ಬೊಮ್ಮಾಯಿ, 'ಎಲ್ಲಾ 66 ಬಿಜೆಪಿ ಶಾಸಕರು ಎಲ್‌ಪಿ ಆಗಲು ಸಮರ್ಥರಾಗಿದ್ದಾರೆ. ನಾಳೆಯಿಂದ (ಜುಲೈ 4) ಅಧಿಕೃತವಾಗಿ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.