ರಾಜಕೀಯ

ವಿಪಕ್ಷ ನಾಯಕನ ಆಯ್ಕೆ ಮಾಡದೆ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದೆ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ವಿಪಕ್ಷ ನಾಯಕನ ಆಯ್ಕೆ ಮಾಡದೆ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದೆ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ. ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕೇಳಿದೆ.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್ ಗೆ ಮಾತ್ರ. ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.