ರಾಜಕೀಯ

ಪೆನ್‌ಡ್ರೈವ್‌ ಬಿಡುಗಡೆಗೆ ಕಾಂಗ್ರೆಸ್ಸಿನವರಿಂದಲೇ ತಡೆ: ಹೆಚ್.ಡಿ.ಕುಮಾರಸ್ವಾಮಿ

ಪೆನ್‌ಡ್ರೈವ್‌ ಬಿಡುಗಡೆಯನ್ನು ಕಾಂಗ್ರೆಸ್ ನಾಯಕರೇ ತಡೆಯುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ಪೆನ್‌ಡ್ರೈವ್‌ ಬಿಡುಗಡೆಗೆ ಕಾಂಗ್ರೆಸ್ಸಿನವರಿಂದಲೇ ತಡೆ: ಹೆಚ್.ಡಿ.ಕುಮಾರಸ್ವಾಮಿ
ಹೆಚ್'ಡಿ.ಕುಮಾರಸ್ವಾಮಿ
Published On :

ಬೆಂಗಳೂರು: ಪೆನ್‌ಡ್ರೈವ್‌ ಬಿಡುಗಡೆಯನ್ನು ಕಾಂಗ್ರೆಸ್ ನಾಯಕರೇ ತಡೆಯುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಸಾಮಾನ್ಯ ಪೆನ್‍ಡ್ರೈವ್ ಅಲ್ಲ. ಈ ಪೆನ್‍ಡ್ರೈವ್ ರಿಲೀಸ್‍ಗೆ ನನಗೆ ಆತುರ ಇಲ್ಲ. ಪೆನ್‍ಡ್ರೈವ್ ಬಿಡುಗಡೆಯನ್ನು ಕಾಂಗ್ರೆಸ್‌ನವರೇ ತಡೆಯುತ್ತಿದ್ದಾರೆಂದು ಹೇಳಿದರು.

ಇನ್ನೂ ತುಂಬಾ ವಿಚಾರ ಸಿಗಲಿದೆ. ಈಗಲೇ ಆತುರಪಡಬೇಡಿ. ಕಾಂಗ್ರೆಸ್‍ನಲ್ಲಿ ವಿಕೆಟ್ ಬೀಳಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಇದು ಸಾಮಾನ್ಯ ಪೆನ್‍ಡ್ರೈವ್ ಅಲ್ಲ. ನಾನು ಎಲ್ಲೂ ಕದ್ದು ಓಡಿ ಹೋಗುವುದಿಲ್ಲ. ಹಿಟ್ ಆ್ಯಂಡ್ ರನ್ ಪ್ರಶ್ನೆಯೇ ಇಲ್ಲ. ಈ ಹಿಂದೆ 2008-2013ರ ಅವಧಿಯಲ್ಲಿನ ಹಗರಣಗಳ ಬಗ್ಗೆ ನಾನು ದಾಖಲೆ ಇಟ್ಟು ಮಾಡಿದ್ದೇನೆ ಎಂದು ತಿಳಿಸಿದರು.

ವರ್ಗಾವಣೆ ದಂಧೆಗೆ ಅಡ್ಡಗಳನ್ನು ಮಾಡಿಕೊಂಡಿದ್ದಾರೆ. ಈ ದರಪಟ್ಟಿ ಅವರೇ ಕೊಟ್ಟಿದ್ದ ಜಾಹೀರಾತಿನ ಮುಂದುವರೆದ ಭಾಗ ಇರಬಹುದು. ವಾಸ್ತವಾಂಶವನ್ನು ಸದನದ ಮುಂದೆ ಇಟ್ಟಿದ್ದೇನೆ. ಭ್ರಷ್ಟಾಚಾರ ನಿಲ್ಲಿಸುವ ಧೈರ್ಯವಿದ್ದರೆ ಕ್ರಮ ಕೈಗೊಳ್ಳಲಿ. ಈ ದರಪಟ್ಟಿ ಈಗ ಇವರ ಅವಧಿಯಲ್ಲೇ ಮಾಡಿದ್ದಾರೆ. ಅಧಿಕಾರಿಗಳಿಂದಲೇ ಈ ಮಾಹಿತಿ ಸೋರಿಕೆ ಆಗಿದೆ ಎಂದರು.

ನಾನು ಒಕ್ಕಲಿಗ ಸಮಾಜದಲ್ಲಿ ಯಾರನ್ನೂ ಬೆಳೆಯಲು ಅಡ್ಡಿ ಮಾಡಿಲ್ಲ. ಭ್ರಷ್ಟಾಚಾರದ ದಾಖಲೆ ಇಟ್ಟಿದ್ದಕ್ಕೆ ಜಾತಿ ಬಣ್ಣ ಕಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಯಾವುದಾದರೂ ಜಾತಿ ಎಂದೆಯೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.