ರಾಜಕೀಯ

ಜುಲೈ 19ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಮಲ್ಲಿಕಾರ್ಜುನ ಖರ್ಗೆ ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 19ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಜುಲೈ 19ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಮಲ್ಲಿಕಾರ್ಜುನ ಖರ್ಗೆ ಭಾಗಿ
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 19ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 

ಜುಲೈ 19 ರಂದು ಸಂಜೆ 6.30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾಲ್ಗೊಳ್ಳಲಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸುತ್ತಿದ್ದು, ಬಿಜೆಪಿಯನ್ನು ಮಣಿಸಲು ವಿವಿಧ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿಯೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಜುಲೈ 19ರಂದು ಬೆಂಗಳೂರಿನಲ್ಲಿ ರಾಜ್ಯದ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸಮ್ಮುಖದಲ್ಲೇ ಎಲ್ಲ ಸಚಿವರಿಗೂ ರಾಹುಲ್‌ ಗಾಂಧಿ ಸಲಹೆ ಸೂಚನೆ ನೀಡಲಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಚಿವರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.