ಬಿಜೆಪಿಯ ಬಿ ಟೀಂ ಜೆಡಿಎಸ್ ಎಂಬುದನ್ನು ಸಾಬೀತುಪಡಿಸಲು ಹೆಚ್ ಡಿಕೆ ಹೊರಟಿದ್ದಾರೆ: ದಿನೇಶ್ ಗುಂಡೂರಾವ್
ಲೋಕಸಭೆ ಚುನಾವಣೆಯ 2024ರಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿವಿದಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ 2024ರಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿವಿದಿದ್ದಾರೆ.
‘ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು, ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೆಚ್ ಡಿಕೆ ಹೊರಟಿದ್ದಾರೆ. ಜೆಡಿಎಸ್ಗೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ ಎಂದಿದ್ದಾರೆ.
ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಅವರು, ಮೈತ್ರಿ ಮಾಡಿಕೊಳ್ಳುವ ಬದಲು ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಲಿ, ಆಗ ಅವರೇ ವಿಪಕ್ಷ ನಾಯಕರಾಗಬಹುದು, ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ ಎಂದು ಟೀಕಿಸಿದ್ದಾರೆ.
JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


