ಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಘಟಶ್ರಾದ್ಧ: ಐಎಎಸ್ ಜೀತ ಪದ್ಧತಿ; ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ!
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು.

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ರಾಜಕಾರಣಿಗಳ ಸೇವೆಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ಟೀಕಿಸಿದ್ದಾರೆ.
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರ್ಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆತಿಥ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಹೇಳಿದ್ದಾರೆ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ.
ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಹೇಳಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ ಎಂದು ಆಗ್ರಹಿಸಿದ್ದಾರೆ.
135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


