ರಾಜಕೀಯ

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಪದಗ್ರಹಣ

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ವಿಧಾನ ಪರಿಷತ್‍ನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಪದಗ್ರಹಣ
ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ರಾಜ್ಯದ ನೂತನ ರಾಜ್ಯಾಧ್ಯಕ್ಷರಾಗಿ ಡಾ. ಮುಖ್ಯಮಂತ್ರಿ ಚಂದ್ರು ಅವರು ಅಧಿಕಾರ ಸ್ವೀಕರಿಸಿದರು
Published On :

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ವಿಧಾನ ಪರಿಷತ್‍ನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಪೃಥ್ವಿರೆಡ್ಡಿ ಅವರಿಂದ ಮುಖ್ಯಮಂತ್ರಿ ಚಂದ್ರು ಅಧಿಕಾರ ಸ್ವೀಕರಿಸಿದರು.

ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ರಾಜ್ಯ ಎಎಪಿ ಘಟಕದಲ್ಲಿ ಕೆಲ ಬದಲಾವಣೆಗಳನ್ನು ಪಕ್ಷದ ವರಿಷ್ಠರು ಮಾಡಿದ್ದರು.

ಮುಂಬರುವ ಲೋಕಸಭಾ ಚುನಾವಣೆಯನ್ನ‌ ಗಮನದಲ್ಲಿಟ್ಟುಕೊಂಡೇ ಅಧ್ಯಕ್ಷರು, ಪದಾಧಿಕಾರಿಗಳನ್ನ ಹೊಸದಾಗಿ ನೇಮಿಸಲಾಗಿತ್ತು.

ಇದರಂತೆ ರಾಜ್ಯ ಸಂಚಾಲಕರಾಗಿದ್ದ ಪೃಥ್ವಿರೆಡ್ಡಿಯ ಜಾಗಕ್ಕೆ ನೂತನ ಅಧ್ಯಕ್ಷರನ್ನಾಗಿ ಹಿರಿಯ ನಾಯಕ ಮುಖ್ಯಮಂತ್ರಿ ಚಂದ್ರು ಅವರನ್ನ ನೇಮಕ ಮಾಡಿದ್ದಾರೆ.

ಜೊತೆಗೆ ಉತ್ತರ ದಕ್ಷಿಣ ಕರ್ನಾಟಕಕ್ಕೆ ಇಬ್ಬರು ಪ್ರಧಾನ ಕಾರ್ಯದರ್ಶಿಗಳು ಹಾಗೂ ನೂತನ ಉಪಾಧ್ಯಕ್ಷರನ್ನ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.