ರಾಜಕೀಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ

ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಮತ್ತು ಅವರ ಪತ್ನಿ ಅಮೃತಾ ರೈ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ
ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ
Published On :

ಬೆಂಗಳೂರು: ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಮತ್ತು ಅವರ ಪತ್ನಿ ಅಮೃತಾ ರೈ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ದಿಗ್ವಿಜಯ್ ಸಿಂಗ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ. 

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಬೆಳಗಾವಿ ಜಿಲ್ಲೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಸಹ ಉಪಸ್ಥಿತರಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕರಾದ ದಿಗ್ವಿಜಯ್‌ ಸಿಂಗ್‌ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ವೇಳೆ ಉಪಸ್ಥಿತರಿದ್ದರು ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.