ರಾಜಕೀಯ

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು!

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು!
ಶಕುಂತಲಾ ನಟರಾಜ್
Published On :

ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ  ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. 

‘ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಶಕುಂತಲಾ ಪ್ರಶ್ನಿಸಿದ್ದರು. 

ಈ ಸಂಬಂಧ ತುಮಕೂರಿನಲ್ಲಿ ಅವರನ್ನು ವಶಕ್ಕೆ ಪಡೆದ ನಂತರ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ಶಕುಂತಲಾ ನಟರಾಜ್ ತಪ್ಪೊಪ್ಪಿಕೊಂಡಿದ್ದು,  ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.