ತಾಲೂಕು-ಜಿಲ್ಲಾ ಪಂಚಾಯತ್ ಚುನಾವಣೆ: ಕಾಂಗ್ರೆಸ್ ನಿಂದ ಸಮಿತಿ ರಚನೆ
ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ರಾಜ್ಯ ಕಾಂಗ್ರೆಸ್, ಸಚಿವ ಪ್ರಿಯಾಂಕ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವತಯಾರಿ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ರಾಜ್ಯ ಕಾಂಗ್ರೆಸ್, ಸಚಿವ ಪ್ರಿಯಾಂಕ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವತಯಾರಿ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.
ಸಮಿತಿಯ ಸದಸ್ಯರಾಗಿ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಆರ್.ಬಿ. ತಿಮ್ಮಾಪುರ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ನೇಮಿಸಲಾಗಿದೆ.
ಶಾಸಕರಾದ ರೂಪಾ ಶಶಿಧರ್, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್, ವಿಧಾನಪರಿಷತ್‍ನ ಸದಸ್ಯ ಎಸ್.ರವಿ, ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ್ ಸಿಂಗ್ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ ಗೌಡ ಸಮಿತಿಯ ಸದಸ್ಯರಾಗಿದ್ದು, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಸಮಿತಿಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸಮಿತಿಯಲ್ಲಿರುವವರು ತಮಗೆ ನೀಡಿರುವ ಜವಾಬ್ದಾರಿಗಳನ್ನು ತಕ್ಷಣವೇ ವಹಿಸಿಕೊಂಡು ಚುನಾವಣೆಯು ಯಶಸ್ವಿಯಾಗಿ ನಡೆಯುವಂತಾಗಲು ಕಾನೂನಾತ್ಮಕ ಸಾಧಕ-ಬಾಧಕಗಳನ್ನು ಪರಾಮರ್ಶಿಸಿ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣೆಯನ್ನು ನಡೆಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೂಲಂಕುಶವಾಗಿ ವರದಿಯನ್ನು 15 ದಿನಗಳ ಒಳಗಾಗಿ ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


