ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ; ಬಿಎಸ್'ವೈ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ. ಅಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ರಾಜ್ಯ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದೂ ಕಂಡುಬಂದಿದೆ.
ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ವಿಪಕ್ಷ ನಾಯಕ ಸ್ಥಾನ ಸೇರಿದಂತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್ ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕ ಸ್ಥಾನದ ರೇಸ್‌ನಲ್ಲಿ ಮುಂದೆ ಇದ್ದಾರೆ.
ವಿಪಕ್ಷ ನಾಯಕನ ಸ್ಥಾನ ನಿರ್ಣಾಯಕ ಆಗಿರುವುದರಿಂದ ಬಿಜೆಪಿ ಅಳೆದು ತೂಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಎಕೆಂದರೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ತಪ್ಪು ಹೆಜ್ಜೆಗಳನ್ನು ಜನರ ಮುಂದಿಟ್ಟು ಪ್ರತಿಯೊಂದು ಸಿಕ್ಕ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಲು ವಿಪಕ್ಷ ನಾಯಕನ ಸ್ಥಾನ ಬಿಜೆಪಿಗೆ ಪ್ರಮುಖವಾಗಿದೆ.
ವಿಪಕ್ಷ ದಾಳಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್‌ನಲ್ಲಿ ಹಲವು ಹಿರಿಯ ಶಾಸಕರಿರುವ ಕಾರಣಕ್ಕಾಗಿ ಬಿಜೆಪಿಯಲ್ಲಿಯೂ ಅಂತಹದ್ದೇ ನಾಯಕನನ್ನು ಆಯ್ಕೆ ಮಾಡಲು ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


