ರಾಜಕೀಯ

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಮಾಜಿ ಸಿಎಂ ಯಡಿಯೂರಪ್ಪ

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಮಾಜಿ ಸಿಎಂ ಯಡಿಯೂರಪ್ಪ
ಯಡಿಯೂರಪ್ಪ
Published On :

ಶಿವಮೊಗ್ಗ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ. ಯಾವುದೇ ಸಮಯದಲ್ಲೂ ಮೋದಿಯವರು ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಈಗ ಕೊಡುತ್ತಿರುವುದು ಕೂಡ ಕೇಂದ್ರ ಸರ್ಕಾರ, ಅದು ಉಚಿತವಾಗಿ ಎಂದು ತಿಳಿಸಿದರು.

ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.