ಜುಲೈ 3ರ ಒಳಗೆ ಪ್ರತಿಪಕ್ಷ ನಾಯಕನ ಆಯ್ಕೆ: ಮಾಜಿ ಸಿಎಂ ಸದಾನಂದಗೌಡ
ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ...

ಚಾಮರಾಜನಗರ: ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ ಹೇಳಿದ್ದಾರೆ.
ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ ಮಾಡಲಾಗುವುದು ಎಂದರು.
ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ನಾವು ಕೊಡುತ್ತೇವೆ. ಅಳೆದು ತೂಗಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದರು.
ಜುಲೈ 3ರಿಂದ 10 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿದ್ದರಾಮಯ್ಯನವರು ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಅಧಿವೇಶನ ಆರಂಭಕ್ಕೂ ಮುನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಹೀಗಾಗಿ ಯಾರನ್ನು ಮಾಡಿದರೆ ಸೂಕ್ತ ಎಂದು ಬೇರೆ ಬೇರೆ ಮಾರ್ಗಗಳಲ್ಲಿ ಚಿಂತನೆ ನಡೆಸಿದೆ. ಅಲ್ಲದೇ ಪಕ್ಷದ ಇತರೆ ನಾಯಕರುಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


