ಎರಡೂ ಕಡೆ ಸೋತು ಈಗ ನಿರುದ್ಯೋಗಿ ಆಗಿ ಮನೆಯಲ್ಲಿ ಕುಳಿತಿದ್ದೇನೆ, ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ: ವಿ ಸೋಮಣ್ಣ
ಮಾಜಿ ಸಚಿವ, ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದ ಶಾಸಕ ವಿ ಸೋಮಣ್ಣ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋತಿದ್ದಾರೆ.

ಬೆಂಗಳೂರು: ಮಾಜಿ ಸಚಿವ, ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದ ಶಾಸಕ ವಿ ಸೋಮಣ್ಣ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋತಿದ್ದಾರೆ.
ಸೋಲಿನ ಕಹಿ ಅವರನ್ನು ಆಗಾಗ ಕಾಡುತ್ತಲೇ ಇರುತ್ತದೆ.ಸೋಲಿನ ಬಳಿಕ ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ಮೊದಲ ಬಾರಿ ಕಚೇರಿಗೆ ಬಂದಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂಪಾಯಿಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತು ಈಗ ನಿರುದ್ಯೋಗಿಯಾಗಿ ಮನೆಯಲ್ಲಿ ಕುಳಿತಿದ್ದೇನೆ ಎಂದರು.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ: ನಾನು ಹೈಕಮಾಂಡ್ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ. ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ನಾನು ಸನ್ಯಾಸಿ ಅಲ್ಲ, ನನಗೂ ಆಸೆ-ಆಕಾಂಕ್ಷೆಗಳಿವೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ ಎಂದು ಪರೋಕ್ಷವಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಇಂಗಿತ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


