ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ: ಜೈರಾಮ್ ರಮೇಶ್
ಅನ್ನಭಾಗ್ಯ ಯೋಜನೆ ಅಕ್ಕಿ ನೀಡದೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸ ರ್ಕಾರ ಕರ್ನಾಟಕದ ಜನರಿಗೆ ದೌರ್ಬಾಗ್ಯವನ್ನು ಕರುಣಿಸಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ/ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ನೀಡದೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸ ರ್ಕಾರ ಕರ್ನಾಟಕದ ಜನರಿಗೆ ದೌರ್ಬಾಗ್ಯವನ್ನು ಕರುಣಿಸಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆದರಿಕೆಯಂತೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸಲಾಗಿದೆ ಎಂದು ಆರೋಪಿಸಿದರು.
“ಜನವರಿ 1, 2023 ರಿಂದ ಮೇ 24, 2023 ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕವೊಂದರಿಂದಲೇ ಎಲ್ಲ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಲ್‌ಗೆ 3,400 ದರದಲ್ಲಿ ಸಂಗ್ರಹಿಸಿದ ಶೇ 95 ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶಃ ಇದು ಮೋದಿಜೀಯವರ ಆಶೀರ್ವಾದದಿಂದಲೇ ಆಗಿರಬೇಕು” ಎಂದು ಹರಿಹಾಯ್ದಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಜೊತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.
”ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಶಿಕ್ಷೆ ನೀಡುತ್ತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆದರಿಕೆಯಂತೆ ಮೋದಿ ಅವರು ತಮ್ಮ ಆಶೀರ್ವಾದವನ್ನು ಅತ್ಯಂತ ವೇಗದಲ್ಲಿ ಹಿಂತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಗಳನ್ನು ಮಾಡುತ್ತದೆ. ಜೊತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನ ಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.
ಜೂನ್ 23ರಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದರು ಎಂದು ಮುನಿಯಪ್ಪ ಅವರು ಆರೋಪಿಸಿದ್ದರು.
ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುನಿಯಪ್ಪ ಅವರು, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


