ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು: ಈಶ್ವರಪ್ಪಗೆ ಸದಾನಂದ ಗೌಡ ತಿರುಗೇಟು
ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಮಾಜಿ ಸಿಎಂ ಸದಾನಂದ ಗೌಡ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಮಾಜಿ ಸಿಎಂ ಸದಾನಂದ ಗೌಡ ಅವರು ತಿರುಗೇಟು ನೀಡಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಈಶ್ವರಪ್ಪ ಅವರು, ಬಿಜೆಪಿ ಪಕ್ಷದಲ್ಲಿ ಶಿಸ್ತು ಕಡಿಮೆಯಾಗಲು ಕಾಂಗ್ರೆಸ್ನ ಗಾಳಿ ಸೋಕಿರುವುದೇ ಕಾರಣ. ಕಾಂಗ್ರೆಸ್ ನಾಯಕರು ಬಿಜೆಪಿ ಪಕ್ಷಕ್ಕೆ ಬಂದಿರುವುದರಿಂದ ಬಿಜೆಪಿ ಪಕ್ಷದಲ್ಲಿ ಕೆಲವೆಡೆ ಶಿಸ್ತು ಇಲ್ಲದಾಗಿದೆ. ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿದೆ. ಇವೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಗೂ ಅವಕಾಶ ಮಾಡಿಕೊಟ್ಟಿತ್ತು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಹೊಂದಾಣಿಕೆ ಆಗಿದೆ. ಆದರೆ, ಬಿಜೆಪಿ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಆಗಿಲ್ಲ. ಪಕ್ಷಾಂತರವಾಗಿ ಬಂದವರಿಂದಲೇ ಬಿಜೆಪಿಯಲ್ಲಿ ಅಶಿಸ್ತು ತುಂಬಿದೆ. ಶಿಸ್ತು ಹೋಗಿದೆ ಎಂಬ ಮಾತನ್ನು ಒಪ್ಪಲಾಗುವುದಿಲ್ಲ. ನಮ್ಮ ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಈಶ್ವರಪ್ಪ ಮಾತಿಗೆ ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಫಲಿತಾಂಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿರುವುದರ ಬಗ್ಗೆ ನೋವಿದೆ. ಈ ಬಗ್ಗೆ ಬಹಿರಂಗವಾಗಿವಾಗಿ ಮಾತನಾಡುವುದು ಸರಿಯಲ್ಲ. ಮತ್ತಷ್ಟು ಗೌಪ್ಯವಾಗಿ ಸಭೆಗಳು ನಡೆಯಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


