ರಾಜಕೀಯ

ನಟ ಸಾಧು ಕೋಕಿಲಾ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ: ಸಂಗೀತ ಮಾಂತ್ರಿಕನಿಗೆ ಹೊಸ ಜವಾಬ್ದಾರಿ

ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ಜನಪ್ರಿಯ ವ್ಯಕ್ತಿಗಳಿಗೆ ಪಕ್ಷಗಳು ಗಾಳ ಹಾಕಲು ಶುರು ಮಾಡಿದ್ದಾರೆ. ಈಗಾಗಲೇ ಕೆಲವು ರಾಜಕಾರಣಿಗಳು ಅತ್ತಿಂದಿತ್ತ ಇತ್ತಿಂದತ್ತ ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ.

ನಟ ಸಾಧು ಕೋಕಿಲಾ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ: ಸಂಗೀತ ಮಾಂತ್ರಿಕನಿಗೆ ಹೊಸ ಜವಾಬ್ದಾರಿ
ಕಾಂಗ್ರೆಸ್ ಸೇರಿದ ನಟ ಸಾಧುಕೋಕಿಲಾ
Published On :

ಬೆಂಗಳೂರು: ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ಜನಪ್ರಿಯ ವ್ಯಕ್ತಿಗಳಿಗೆ ಪಕ್ಷಗಳು ಗಾಳ ಹಾಕಲು ಶುರು ಮಾಡಿದ್ದಾರೆ. ಈಗಾಗಲೇ ಕೆಲವು ರಾಜಕಾರಣಿಗಳು ಅತ್ತಿಂದಿತ್ತ ಇತ್ತಿಂದತ್ತ ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ. ಇದೀಗ ಸ್ಯಾಂಡಲ್​ವುಡ್​ ಖ್ಯಾತ ಸಂಗೀತ ನಿರ್ದೇಶಕ, ಹಾಸ್ಯ ನಟ ಸಾಧು ಕೋಕಿಲಾ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ.

ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಈ ನೇಮಕ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ‘ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧು ಕೋಕಿಲ ಅವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ’ ಎಂದು ಆಶಿಸಿದ್ದಾರೆ. ಸಾಧುಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿದ್ದರು.

ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ  ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.