ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಮತ್ತು ರಾಜಸ್ಥಾನ ಎರಡರಲ್ಲೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕಳೆದ ಗುರುವಾರ ಹೇಳಿದ್ದರು.
ಐಎಂಐಎಂ ನ ಮೊದಲ ಪಟ್ಟಿಯಲ್ಲಿ ಮೂರು ಹೆಸರುಗಳನ್ನು ಪಕ್ಷದಿಂದ ಘೋಷಿಸಲಾಗಿದ್ದು, ಇನ್ನಷ್ಟು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಎಐಎಂಐಎಂ ಪಕ್ಷದ ಮೂಲಗಳ ಪ್ರಕಾರ, ಬೆಳಗಾವಿ ಉತ್ತರದಿಂದ ಲತೀಫ್ ಖಾನ್ ಅಮೀರ್ಖಾನ್ ಪಠಾಣ್, ಹುಬ್ಬಳ್ಳಿ ಧಾರವಾಡ ಪೂರ್ವದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಹಾಗೂ ಬಸವನ ಬಾಗೇವಾಡಿಯಿಂದ ಅಲ್ಲಾಬಕ್ಷ್ ಮೆಹಬೂಬ್ ಸಾಬ್ ಬಿಜಾಪುರ್ ಅವರು ಅಭ್ಯರ್ತಿಗಳು. ಇವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ.
ಈ ಮೂವರು ಅಭ್ಯರ್ಥಿಗಳು ಸಾಕಷ್ಟು ಮುಸ್ಲಿಂ ಜನಸಂಖ್ಯೆ ಇರುವ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದಾರೆ. ಇಂತಹ ಜನಸಂ ಹೊಂದಿರುವ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಿವೆ ಮತ್ತು ಈ ಭಾಗಗಳಿಗೆ ಅಭ್ಯರ್ಥಿಗಳನ್ನು ಪಕ್ಷದ ನಾಯಕತ್ವವು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ಎದುರಿಸಲು ಹಾಗೂ ಹೊಲಸು ರಾಜಕಾರಣವನ್ನು ಹೊರ ಹಾಕಲು ಪಕ್ಷದ ಕಾರ್ಯಕರ್ತರು ಅದರ ಶ್ರಮಿಸಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


