ರಾಜಕೀಯ

'ಒಕ್ಕಲಿಗರ ಹೆಸರು ಹೇಳಿಕೊಂಡು ಬೆಳೆದು, ಒಕ್ಕಲಿಗರಿಗೆ ಚೂರಿ ಹಾಕುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು; ಮಗನಿಗಾಗಿ ನನ್ನನ್ನು ಬಲಿಕೊಟ್ಟರು'

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಹೆಸರು ಹೇಳಿಕೊಂಡು ಬೆಳೆದು, ಒಕ್ಕಲಿಗರಿಗೆ ಚೂರಿ ಹಾಕುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು ಎಂಬ ವಿಚಾರವನ್ನು ಜನರೇ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

'ಒಕ್ಕಲಿಗರ ಹೆಸರು ಹೇಳಿಕೊಂಡು ಬೆಳೆದು, ಒಕ್ಕಲಿಗರಿಗೆ ಚೂರಿ ಹಾಕುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು; ಮಗನಿಗಾಗಿ ನನ್ನನ್ನು ಬಲಿಕೊಟ್ಟರು'
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮತ್ತು ಕುಮಾರಸ್ವಾಮಿ ಅವರ ಬಗ್ಗೆ ನಮಗೆ ಗೌರವವಿದೆ. ಅವರ ವಿರುದ್ಧ ನಾನು ಮಾತನಾಡಲು ಇಷ್ಟಪಡುವುದಿಲ್ಲ. ಕುಮಾರಸ್ವಾಮಿ ಅವರು ಅವರ ಮಗನಿಗಾಗಿ ನನ್ನನ್ನು ಬಲಿಕೊಟ್ಟರು. ಜತೆಗೆ ದೇವೇಗೌಡರನ್ನು ಬಲಿಕೊಟ್ಟರು ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಹೆಸರು ಹೇಳಿಕೊಂಡು ಬೆಳೆದು, ಒಕ್ಕಲಿಗರಿಗೆ ಚೂರಿ ಹಾಕುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು ಎಂಬ ವಿಚಾರವನ್ನು ಜನರೇ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನಾನು ಸೋತಿದ್ದಕ್ಕೆ ನೋವಿಲ್ಲ. ಆದರೆ, ದೇವೇಗೌಡರು ಸೋತಿದ್ದು ಬೇಸರ ತಂದಿದೆ. ಜತೆಗೆ ಕುಮಾರಸ್ವಾಮಿ ದೊಡ್ಡವರು, ಮಾಜಿ ಮುಖ್ಯಮಂತ್ರಿ, ಅವರು ಏನು ಮಾತನಾಡಿದರು ನಡೆಯುತ್ತೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಿಂದ ಸುಧಾ ಶಿವರಾಮೇಗೌಡ, ಚೇತನ್ ಶಿವರಾಮೇಗೌಡ ಸೇರಿದಂತೆ ನನಗೂ ಟಿಕೆಟ್ ಕೊಡಬಹುದು. ಜತೆಗೆ ಕಾಂಗ್ರೆಸ್ ಪಕ್ಷದಿಂದಲೇ ಕರೆದು ಟಿಕೆಟ್ ಕೊಡ ಬಹುದು. ರಾಜ್ಯದಲ್ಲಿ ಪಕ್ಷಗಳು ಅಭ್ಯರ್ಥಿ ಘೋಷಿಸಿದ ಮೇಲೂ ಬೇರೆ ಅಭ್ಯರ್ಥಿ ಘೋಷಣೆ ಮಾಡಿಲ್ಲವೇ. ನನಗೆ ಜೆಡಿಎಸ್ ಪಕ್ಷದ ಬಗ್ಗೆ ವಿರೋಧವಿಲ್ಲ. ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಮಾತ್ರ ವಿರೋಧ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.