ಶಾಸಕಿ ರೂಪಾಲಿ ನಾಯ್ಕ್ ಆರೋಪ ಸಾಬೀತಾದರೆ ರಾಜಕೀಯ ತೊರೆಯುತ್ತೇನೆ: ಮಾಜಿ ಶಾಸಕ ಸತೀಶ್ ಸೈಲ್
ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೂಡಿಕೆ ಮಾಡಿರುವ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ರೂಪಾಲಿ ನಾಯ್ಕ್ ಅವರು ಆರೋಪಿಸಿದ್ದಾರೆ. ಆದರೆ, ಕಂಪನಿಗು ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದರು, ಈ ಕುರಿತು ಕೆಲ ದಾಖಲೆಗಳನ್ನು ಪ್ರದರ್ಶಿಸಿದರು.
ಇದು ನನ್ನ ಕಂಪನಿಯಲ್ಲ. ಇದನ್ನು ಸಾಬೀತುಪಡಿಸಲು ಪ್ಯಾನ್ ಸಂಖ್ಯೆಗಳೂ ಕೂಡ ನನ್ನ ಬಳಿ ಇವೆ. ಇದು ಆನ್‌ಲೈನ್‌ನಲ್ಲಿಯೂ ಲಭ್ಯವಿದೆ ಎಂದು ತಿಳಿಸಿದ್ದಾರೆ.
ರೂಪಾಲಿ ನಾಯ್ಕ್ ಅವರು, ನಾನು ಹೂಡಿಕೆ ಮಾಡಿರುವ ಕಂಪನಿಗೆ 6.5 ಕೋಟಿ ರೂ.ಗಳ ಗುತ್ತಿಗೆ ನೀಡಲಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಲಿ. ಆರೋಪ ಸಾಬೀತಾಗಿದ್ದೇ ಆದರೆ, ರಾಜಕೀಯ ತ್ಯಜಿಸುತ್ತೇನೆ ಎಂದು ಸವಾಲು ಹಾಕಿದರು.
ಇದನ್ನೂ ಓದಿ: ಬಿಜೆಪಿಯಲ್ಲಿ ಸ್ಫೋಟಗೊಂಡ ಅಸಮಾಧಾನದ ಜ್ವಾಲಾಮುಖಿ: ಜಾರಕಿಹೊಳಿ ಗೋಕಾಕ್ ಕ್ಷೇತ್ರವನ್ನ ಕುಮಟಳ್ಳಿಗೆ ಬಿಟ್ಟುಕೊಡ್ಲಿ; ಸವದಿ ಪುತ್ರ
ಕಂಪನಿಗೆ ಒಂದು ರೂಪಾಯಿಯಾದರೂ ಬಂಡವಾಳ ಹೂಡಿರುವುದು ಕಂಡು ಬಂದರೆ ನಾನು ರಾಜಕೀಯ ತ್ಯಜಿಸುತ್ತೇನೆ, ವಿಫಲವಾದರೆ ಶಾಸಕಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು ಎಂದರು.
ಇದೇ ವೇಳೆ ಮದ್ಯವ್ಯಸನಿಯಾಗಿರುವ ಹಿನ್ನೆಲೆಯಲ್ಲಿ ಲಿವರ್ ಹಾಳಾಗಿದೆ ಎಂಬ ಹೇಳಿಕೆಗಳನ್ನೂ ಸತೀಶ್ ಅವರು ಖಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


