ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಫೋಟೋ ವೈರಲ್: ವಸತಿ ಸಚಿವರ ಪ್ರತಿಕ್ರಿಯೆ
ರಾಜ್ಯ ರಾಜಧಾನಿ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಮುನ್ನೆಲೆಗೆ ಬಂದಿದ್ದು, ತಮ್ಮ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದ ಬಗ್ಗೆ ಸ್ವತಃ ಸೋಮಣ್ಣ ಮುನಿಸು ವ್ಯಕ್ತಪಡಿಸಿದ್ದರು.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಮುನ್ನೆಲೆಗೆ ಬಂದಿದ್ದು, ತಮ್ಮ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದ ಬಗ್ಗೆ ಸ್ವತಃ ಸೋಮಣ್ಣ ಮುನಿಸು ವ್ಯಕ್ತಪಡಿಸಿದ್ದರು.
ಈ ವಿಷಯ ಮುನ್ನೆಲೆಗೆ ಬಂದ ವೇಳೆಯಲ್ಲಿ ಸಚಿವ ಸೋಮಣ್ಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗಿದ್ದ ಫೋಟೋವೊಂದು ವೈರಲ್ ಆಗಿತ್ತು, ಇದನ್ನು ನೋಡಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕ ಎನ್ನಲಾಗಿತ್ತು.
ಸೋಮಣ್ಣ ಬಿಜೆಪಿಯಲ್ಲಿ ಇರ್ತಾರಾ? ಕಾಂಗ್ರೆಸ್ಗೆ ಹೋಗ್ತಾರಾ? ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗಿತ್ತು. ಪರೋಕ್ಷವಾಗಿ ತನ್ನ ಮಗನಿಗೂ ಟಿಕೆಟ್ ನೀಡಬೇಕು ಇಲ್ಲದಿದ್ರೆ ಪಕ್ಷದಲ್ಲಿ ನಾನಿರಲ್ಲ ಎಂದು ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಸೋಮಣ್ಣ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿನ ಫೋಟೋ ಒಂದು ವೈರಲ್ ಆಗಿದೆ.
ಕಾಂಗ್ರೆಸ್‌ನತ್ತ ಹೊರಡಲು ವಿ.ಸೋಮಣ್ಣ ಸಿದ್ಧರಾಗಿದ್ದಾರೆ ಎಂಬ ವದಂತಿಗೆ ಪುಷ್ಟಿ ನೀಡುವಂತಿರುವ ಫೋಟೋ ಇದಾಗಿದೆ. ಆದರೆ ವೈರಲ್ ಆಗ್ತಿರುವ ಫೋಟೋ ಇವತ್ತಿನದಲ್ಲ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ತೆಗೆದಿರುವ ಫೋಟೋ ಅದಾಗಿದೆ.
ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸುವಾಗ ವಿಮಾನದಲ್ಲಿದ್ದಾಗ ಕ್ಲಿಕ್ಕಿಸಿರುವ ಫೋಟೋ ಎಂಬ ಮಾಹಿತಿ ಲಭ್ಯವಾಗಿದೆ, ಇನ್ನೂ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿರುವ ಸೋಮಣ್ಣ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ ಮಾಧ್ಯಮಗಳ ಸೃಷ್ಠಿ ಎಂದು ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


