ಬಿಎಸ್‌ವೈ-ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಮುರುಗೇಶ್ ನಿರಾಣಿ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ ಸೋಮಣ್ಣ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳನ್ನು ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ನಿರಾಕರಸಿದರು.

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ ಸೋಮಣ್ಣ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳನ್ನು ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ನಿರಾಕರಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಸೋಮಣ್ಣ ಇಬ್ಬರೂ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದು, ಇಬ್ಬರಿಗೂ ಸಮಾನ ಗೌರವವಿದೆ, ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ 108 ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಉದ್ಘಾಟನೆ ಸಂದರ್ಭದಲ್ಲಿ ಇಬ್ಬರೂ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದರು.
ಸೋಮಣ್ಣ ಅವರ ಜೊತೆಗಿನ ದೆಹಲಿ ಭೇಟಿಯಲ್ಲಿ ವಿಶೇಷವೇನೂ ಇಲ್ಲ. ಸಣ್ಣಪುಟ್ಟ ಸಮಸ್ಯೆಗಳನ್ನು ವೇದಿಕೆಯಲ್ಲಿಯೇ ಪರಿಹರಿಸಲು ಪಕ್ಷ ಸಮರ್ಥವಾಗಿದೆ ತಿಳಿಸಿದರು.
ಪಕ್ಷ ನನ್ನನ್ನು ನಿರ್ಲಕ್ಷಿಸಿಲ್ಲ. ನನಗೆ ಬೆಳಗಾವಿಯ ವಿಜಯ ಸಂಕಲನ ಯಾತ್ರೆಯ ಉಸ್ತುವಾರಿಯನ್ನು ವಹಿಸಲಾಗಿದೆ. ಪಕ್ಷವು 224 ಕ್ಷೇತ್ರಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತಿದ್ದು, ಮುಖ್ಯಮಂತ್ರಿಯಾಗುವ ಸಾಮರ್ಥ್ಯವಿರುವ ಹಲವು ನಾಯಕರು ಪಕ್ಷದಲ್ಲಿದ್ದಾರೆ ಎಂದರು.
ಇದೇ ವೇಳೆ ಕಬ್ಬು ರೈತರು ತಂದ ಉತ್ಪನ್ನವನ್ನು ತೂಕ ಮಾಡುವಲ್ಲಿ ವಂಚನೆ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿಹಾಕಿದ ನಿರಾಣಿ, ಆಯಾ ಸಕ್ಕರೆ ಕಾರ್ಖಾನೆಗಳಲ್ಲಿ ರೈತರ ಸಮ್ಮುಖದಲ್ಲಿ ಕಬ್ಬನ್ನು ತೂಕ ಮಾಡಲಾಗುತ್ತಿದೆ. ಅಲ್ಲಿಗೆ ಯಾರು ಬೇಕಾದರೂ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಹೇಳಿದರು.
ಏತನ್ಮಧ್ಯೆ, ಮಹದೇಶ್ವರ ದೇವರ ಪ್ರತಿಮೆ ಉದ್ಘಾಟನೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬೊಮ್ಮಾಯಿಯವರು ಯಡಿಯೂರಪ್ಪ ಅವರೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ನಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಸಾರ ಹೊರಟಿದ್ದಾರೆನ್ನಲಾಗಿದೆ.
ಮತ್ತೊಂದೆ ಸೋಮಣ್ಣ ಅವರಿಗೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಚುನಾವಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


