ಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಗುಡುಗಿದ ಪ್ರಜ್ವಲ್ ರೇವಣ್ಣ
ಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಶುಕ್ರವಾರ ಸಂಸದ ಪ್ರಜ್ವಲ್ ರೇವಣ್ಣ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದರು.

ಹಾಸನ: ಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಶುಕ್ರವಾರ ಸಂಸದ ಪ್ರಜ್ವಲ್ ರೇವಣ್ಣ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದರು.
ಶುಕ್ರವಾರ ಅರಕಲಗೂಡಿನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಕಳೆದ 2 ವರ್ಷಗಳಿಂದ ರಾಮಸ್ವಾಮಿಯವರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆಂದುವಾಗ್ದಾಳಿ ನಡೆಸಿದರು.
ರಾಮಸ್ವಾಮಿ ಅವರು ಜೆಡಿಎಸ್ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಮತ್ತು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ನಾಶಪಡಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಲು ಎಟಿ ರಾಮಸ್ವಾಮಿಯವರು ನಿರಾಕರಿಸಿದ್ದು, ಹೀಗಾಗಿಯೇ ಎ.ಮಂಜು ಅವರಿಗೆ ಪಕ್ಷ ಸೇರಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದರು. ಇದಲ್ಲದೆ ಶಾಸಕರು ಹೆಚ್.ಡಿ.ರೇವಣ್ಣ ಅವರು ಅವಮಾನಿಸಿದ್ದಾರೆಂದು ಆರೋಪಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಸಂಪೂರ್ಣ ಬಹುಮತದೊಂದಿಗೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟುಗಳು ಮತ್ತು ನಕಲಿ ಭರವಸೆಗಳಿಂದ ಜನರು ಹತಾಶರಾಗಿದ್ದು, ಪಕ್ಷದ ಪಂಚರತ್ನ ರಥ ಯಾತ್ರೆಗೆ ಸಮಾಜದ ಎಲ್ಲಾ ವರ್ಗಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


