ಮೊದಲ ಬಾರಿ ಮತದಾನ ಮಾಡುವ 'ಯುವಜನರ' ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆತರುವಲ್ಲಿ ಯುವ ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯುವ ಜವಾಬ್ದಾರಿ ವಹಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರದಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ನೇಮಕ ಮಾಡಿದ್ದು, ರಾಜ್ಯದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ಅವರನ್ನು ಪಕ್ಷದತ್ತ ಸೆಳೆಯುವ ಕೆಲಸವನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಾ ರಾಮಯ್ಯ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಉತ್ಸವ. ಹೀಗಾಗಿ ಈ ಚುನಾವಣೆಯಲ್ಲಿ ವಿಶೇಷವಾಗಿ ಯುವ ಜನಾಂಗವನ್ನು ಸೆಳೆದು ವರಿಷ್ಠರು ತಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಕೈಗೊಂಡು ಪಕ್ಷದ ಪರ ಪ್ರಚಾರ ಬಿರುಸುಗೊಳಿಸುವುದಾಗಿ ತಿಳಿಸಿದ್ದಾರೆ.
Many thanks to @INCIndia President Sri @kharge, AICC General Secretary Sri @rssurjewala, AICC Secretary Sri @duttabhishek, Former CM & CLP Sri @siddaramaiah and KPCC President Sri @DKShivakumar for appointing me as the Chairman of the First-Time Voter campaign pic.twitter.com/u4Doi4fc1N
— RR
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


